ಮಡಿಕೇರಿ, ಫೆ. ೬: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಹಿರಿಯ ನಾಗರಿಕರ ಕಾಯ್ದೆ ೨೦೦೭, ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಕಾನೂನು ಅರಿವು ಮತ್ತು ನೆರವು ಶಿಬಿರ ಕಾರ್ಯಕ್ರಮವನ್ನು ಕುಶಾಲನಗರದ ರೋಟರಿ ಸಂಸ್ಥೆ ಸಭಾಂಗದಲ್ಲಿ ತಾ. ೯ ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.