ಪೊನ್ನಂಪೇಟೆ, ಫೆ. ೬: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಪೊನ್ನಂಪೇಟೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ವಿತರಿಸಲಾಯಿತು.
ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ಡಿ.ಹೆಚ್. ಮೊಯ್ದು ಅವರು ನೀಡಿದ್ದ, ವಿವಿಧ ಕ್ರೀಡಾ ಪರಿಕರಗಳನ್ನು ಕೆ.ಎಂ.ಎಸ್.ಎ. ಪದಾಧಿಕಾರಿಗಳು ಶಾಲೆಗೆ ಹಸ್ತಾಂತರಿಸಿದರು.
ಕೆ.ಎA.ಎಸ್.ಎ. ಅಧ್ಯಕ್ಷ ಆಲೀರ ರಶೀದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಯಾಗಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಪಾಲ್ಗೊಂಡಿದ್ದರು.
ಈ ಸಂದರ್ಭ ಕೆ.ಎಂ.ಎಸ್.ಎ. ಉಪಾಧ್ಯಕ್ಷ ಕುಂಡAಡ ಎ. ರಜ್ಹಾಕ್, ಪ್ರಧಾನ ಕಾರ್ಯದರ್ಶಿ ಮೀತಲತಂಡ ಇಸ್ಮಾಯಿಲ್, ಕೋಶಾಧಿಕಾರಿ ಆಲೀರ ಎ. ಅಜೀಜ್, ಜಂಟಿ ಕಾರ್ಯದರ್ಶಿ ಕಣ್ಣಪ್ಪಣೆ ವೈ. ಅಶ್ರಫ್, ನಿರ್ದೇಶಕರಾದ ಆಲೀರ ಎ. ಹುಸೈನ್, ಚಿಮ್ಮಿಚ್ಚಿರ ಕೆ. ಅಬ್ದುಲ್ಲಾ, ಪುಂಜೆರ ಹೆಚ್. ಅಬ್ದುಲ್ಲಾ, ಮಂದಮಾಡ ರಫೀಕ್ ಮುನ್ನ ಉಪಸ್ಥಿತರಿದ್ದರು.