ಮಡಿಕೇರಿ, ಫೆ. ೬: ಕರ್ನಾಟಕ ರಾಜ್ಯ ದÀಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾ. ೯ ರಂದು ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಜಿಲ್ಲಾ ಸಂಚಾಲಕ ಎನ್.ಆರ್. ದೇವರಾಜು ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯ ಅನುದಾನ ಆಯೋಗ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಮಾನತೆ ಪ್ರೋತ್ಸಾಹಿಸಲು ತಂದಿರುವ ನಿಯಮಾವಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು, ರೋಹಿತ್ ವೇಮುಲ ಕಾಯಿದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಬೇಕು, ಜಾತಿ, ಧರ್ಮ ತಾರತಮ್ಯ ತಡೆಗಟ್ಟಲು ಯುಜಿಸಿ ನಿಯಮವನ್ನು ಕೇಂದ್ರ ಸರಕಾರ ಕೂಡಲೇ ಜಾರಿಗೊಳಿಸಬೇಕೆಂದು ರಾಜ್ಯ ವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದ್ದು, ಅಂದು ಬೆಳಿಗ್ಗೆ ೧೧.೩೦ಕ್ಕೆ ಮಡಿಕೇರಿಯ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಸಿ ನಂತರ ಪ್ರತಿಭಟಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಸಂಘಟನಾ ಸಂಚಾಲಕ ಡಿ.ಆರ್. ಕೆಂಚೇಶ್ವರ್, ಜಿಲ್ಲಾ ಸಂಚಾಲಕ ಎಂ.ಡಿ. ಹರೀಶ್ ಕುಮಾರ್, ಮಹಿಳಾ ಘಟಕದ ಸಂಚಾಲಕಿ ಕೆ.ಕೆ. ಭಾಗ್ಯ, ವಿದ್ಯಾರ್ಥಿ ಒಕ್ಕೂಟದ ಸಂಘಟನಾ ಸಂಚಾಲಕ ಟಿ.ಜಿ. ನೂತನ ಹಾಜರಿದ್ದರು