ಮಡಿಕೇರಿ, ಫೆ. ೬: ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ ಮತ್ತು ತಂಡದ ಸದಸ್ಯರು ನಗರದ ನ್ಯಾಯಬೆಲೆ ಅಂಗಡಿ, ಆಹಾರ ಧಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಮಧ್ಯಾಹ್ನದ ಉಪಹಾರ ಯೋಜನೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿರುವ ಎನ್‌ಆರ್‌ಸಿ ಘಟಕ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗನವರ್, ಎ ರೋಹಿಣಿ ಪ್ರಿಯಾ, ಕೆ.ಎಸ್ ವಿಜಯಲಕ್ಷಿö್ಮ ಹಾಗೂ ಸದಸ್ಯ ಕಾರ್ಯದರ್ಶಿ ಸುಜಾತ.ಡಿ ಹೊಸಮನಿ ಅವರು ಪರಿಶೀಲನಾ ಸಂದರ್ಭದಲ್ಲಿ ಇದ್ದು, ಆಹಾರ ಸುರಕ್ಷತೆ, ಪೌಷ್ಟಿಕ ಆಹಾರ ವಿತರಣೆ, ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ಪಡೆದರು.

ಮೊದಲಿಗೆ ನಗರದ ಜನತಾ ಬಜಾರ್ ಸಂಖ್ಯೆ-೫೯ಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಮತ್ತು ತಂಡದ ಸದಸ್ಯರು ಆಹಾರ ದಾಸ್ತಾನುವಿನಲ್ಲಿ ವ್ಯತ್ಯಾಸ, ಜಾಗೃತಿ ನಾಮಫಲಕ ಪ್ರದರ್ಶನ ಹಾಗೂ ತೂಕ ನವೀಕರಣ ಪತ್ರ ಇಲ್ಲದಿರುವುದು ಸೇರಿದಂತೆ ಹಲವು ನ್ಯೂನತೆಗಳನ್ನು ಕಂಡುಬAದಿರುವುದನ್ನು ಮನಗಂಡು ಕ್ರಮ ಕೈಗೊಂಡರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಭೋದಕ ಆಸ್ಪತ್ರೆಯ ಅಡುಗೆ ಕೋಣೆಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಜಿಲ್ಲಾಸ್ಪತ್ರೆ ಎನ್‌ಆರ್‌ಸಿ ಘಟಕಕ್ಕೆ ಭೇಟಿ ನೀಡಿ ಕಡತ ನಿರ್ವಹಣೆ ಪರಿಶೀಲಿಸಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು, ಸಮರ್ಪಕ ನಿರ್ವಹಣೆ ಮಾಡದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ಮುಲಾಜಿಗೆ ಒಳಗಾಗಬಾರದು ಎಂದು ತಾಕೀತು ಮಾಡಿದರು. ಸರ್ಕಾರಿ ಆಸ್ಪತ್ರೆಯನ್ನು ನಂಬಿ ಹಲವು ಬಡ ಕುಟುಂಬಗಳು ಚಿಕಿತ್ಸೆಗೆ ದಾಖಲಾಗುತ್ತಾರೆ. ಅವರಿಗೆ ಸರಿಯಾದ ಊಟೋಪಚಾರ ಮತ್ತು ವೈದ್ಯಕೀಯ ಚಿಕಿತ್ಸೆ ನೀಡುವುದು ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಆಹಾರ ಆಯೋಗದ ಅಧ್ಯಕ್ಷರು ಸೂಚನೆ ನೀಡಿದರು.

ಬಳಿಕ ದಾಸವಾಳ ಬಳಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಆಹಾರ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಅಲ್ಲಿನ ಮಕ್ಕಳ ಹಾಜರಾತಿ, ತಾಯಿ ಕಾರ್ಡು ವಿತರಣೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ಪೂರೈಕೆ, ಮೊಟ್ಟೆ, ಕಾರದ ಪುಡಿ, ಹೆಸರು ಕಾಳು, ಸಕ್ಕರೆ, ಅಕ್ಕಿ, ಗೋದಿ ವಿತರಣೆ ಬಗ್ಗೆ ಸಂಬAಧಪಟ್ಟವರಿಗೆ ಫೋನ್ ಮೂಲಕ ಕರೆ ಮಾಡಿ ಖಾತರಿಪಡಿಸಿಕೊಂಡರು.

ನAತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಸಂಬAಧಿಸಿದAತೆ ಮಾಹಿತಿ ಪಡೆದರು. ಸರ್ಕಾರ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಸಾಕಷ್ಟು ಹಣ ನೀಡುತ್ತಿದೆ.

ಬಡ ಮಕ್ಕಳಿಗೆ ಸದ್ಬಳಕೆಯಾಗಬೇಕು. ಪೌಷ್ಟಿಕ ಆಹಾರದ ಜೊತೆಗೆ ವಿದ್ಯಾರ್ಜನೆ ಕಡೆಗೆ ಮಕ್ಕಳು ಗಮನ ನೀಡಬೇಕು. ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸುತ್ತಿದ್ದು, ಸರ್ಕಾರದ ಯೋಜನೆಗಳು ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪಬೇಕು ಎಂದು ಹೇಳಿದರು. ನಂತರ ನಗರದ ರೈತ ಸಂಪರ್ಕ ಕೇಂದ್ರ ಹಾಗೂ ಕೀಟನಾಟಕ ಔಷಧಿ ದಾಸ್ತಾನು ಮಳಿಗೆ ವೀಕ್ಷಿಸಿದ ಅಧ್ಯಕ್ಷರು ಮತ್ತು ತಂಡದವರು ಕೀಟನಾಶಕ ಔಷಧಿ ವಿತರಣೆ ಬಗ್ಗೆ ಪರಿಶೀಲಿಸಿ, ಮಾಹಿತಿ ಪಡೆದರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರಾದ ಭೀಮರಾಯ ಕಲ್ಲೂರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ. ಎ.ಜೆ. ಲೋಕೇಶ್, ಡಾ. ನಂಜುAಡಯ್ಯ, ಡಾ. ಸೋಮಶೇಖರ್, ಡಾ. ಅಭಿನಂದನ್, ಡಾ. ಪುರುಷೋತ್ತಮ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಇತರರು ತಮ್ಮ ಇಲಾಖೆಗೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು. ರಾಜ್ಯ ಆಹಾರ ಆಯೋಗದ ಸದಸ್ಯರ ತಂಡವು ಸೋಮವಾರಪೇಟೆ, ವೀರಾಜಪೇಟೆ, ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆಯಿತು.