ಕೂಡಿಗೆ, ಫೆ. ೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳ ಗ್ರಾಮ ಸಭೆ ಗ್ರಾ.ಪಂ. ಅಧ್ಯಕ್ಷ ಕೆ.ಟಿ. ಗಿರೀಶ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಹಾಜರಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ತಮ್ಮ ಶಾಲೆಗೆ ಮೂಲಭೂತ ಸೌಕರ್ಯಗಳ ಜೊತೆಗೆ ಪ್ರಮುಖವಾಗಿ ಶಾಲೆಗೆ ತಡೆಗೋಡೆ ಮತ್ತು ಶೌಚಾಲಯದ ಶುಚಿತ್ವಕ್ಕೆ ಒತ್ತಾಯಿಸಿದರು. ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷ ಕೆ.ಟಿ. ಗಿರೀಶ್ ಮಾತ ನಾಡಿ, ಮುಂದಿನ ದಿನಗಳಲ್ಲಿ ಆದ್ಯತೆ ಅನುಗುಣವಾಗಿ ಕ್ರಿಯಾ ಯೋಜನೆ ಮುಖೇನ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು. ಅಭಿವೃದ್ಧಿ ಅಧಿಕಾರಿ ಮಂಜಳಾ, ಮಕ್ಕಳ ಕಾಯ್ದೆಗಳು ಮತ್ತು ಪ್ರಯೋಜನ ಪಡೆಯಲು ಅನುಸಾರಬೇಕಾಗಿರುವ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮೋಹಿನಿ, ಚಂದ್ರು, ಕಾರ್ಯದರ್ಶಿ ಪುನೀತ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.