*ಗೋಣಿಕೊಪ್ಪ, ಫೆ. ೭: ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳ ಗ್ರಾಮಸಭೆ ಮಾಯಮುಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಧ್ಯಾರ್ಥಿ ಶಿಬಿಲ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮಾಯಮುಡಿ ಗ್ರಾ.ಪಂ. ಅಧ್ಯಕ್ಷ ಟಾಟು ಮೊಣ್ಣಪ್ಪ ಮಾತನಾಡಿ, ಮಕ್ಕಳ ಗ್ರಾಮ ಸಭೆಯು ಮಕ್ಕಳಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಮಕ್ಕಳ ಗ್ರಾಮ ಸಭೆಯಿಂದ ಮಕ್ಕಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಚೆನ್ನಂಗೊಲ್ಲಿ, ಧನುಗಾಲ, ಮಾಯಮುಡಿ ಶಾಲೆಯ ಮಕ್ಕಳು ಶಾಲೆಯ ಅಭಿವೃದ್ಧಿಯ ಬಗ್ಗೆ ಮತ್ತು ತಮಗೆ ಬೇಕಾದ ಸವಲತ್ತುಗಳ ಬಗ್ಗೆ ಎಲ್ಲರ ಗಮನ ಸೆಳೆದರು. ವಿದ್ಯಾರ್ಥಿನಿ ಅಕ್ಷಿತ ವಂದಿಸಿದರು. ಸಾನಿಯಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ್, ಸದಸ್ಯ ಗಿರೀಶ್, ಸಲಹಾ ಸಮಿತಿಯ ಸದಸ್ಯ ಮಾದಪ್ಪ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್, ಮಾಯಮುಡಿ ಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಸಿ ಜಯಮ್ಮ. ಚೆನ್ನಂಗೊಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಗಿರಿಜಾ ಮತ್ತು ಸಹ ಶಿಕ್ಷಕರು ಹಾಜರಿದ್ದರು.