ಮಡಿಕೇರಿ,ಫೆ.೭: ಬೆಂಗಳೂರಿ ನ ಕಿದ್ವಾಯಿ ಆಸ್ಪತ್ರೆ ಹಾಗೂ ಅಲ್ಲಿನ ಲಯನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಮಹಿಳೆಯರಿಗೆ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಇಲ್ಲಿನ ಪೊಲೀಸ್ ಮೈತ್ರಿ ಸಮುದಾಯ ಭವನದಲ್ಲಿ ನಡೆದ ಶಿಬಿರವನ್ನು ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಉದ್ಘಾಟಿಸಿದರು. ಈ ಸಂದರ್ಭ ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕ ಪಿ.ಕೆ.ರಾಜು, ಪೊಲೀಸ್ ನಿರೀಕ್ಷಕ ಚಂದ್ರಶೇಖರ್, ಬೆಂಗಳೂರು ಲಯನ್ಸ್ ಸಂಸ್ಥೆಯ ನಿರ್ದೇಶಕ ಪ್ರಕೃತಿ ಪ್ರಸನ್ನ ಇದ್ದರು.

ಬಳಿಕ ಕಿದ್ವಾಯಿ ಆಸ್ಪತ್ರೆಯ ವೈದ್ಯರುಗಳು ತಪಾಸಣೆ ಮಾಡಿದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಶಿಬಿರದ ಸದುಪಯೋಗ ಪಡೆದುಕೊಂಡರು. ಇದೇ ಸಂದರ್ಭ ಲಯನ್ಸ್ ಸಂಸ್ಥೆ ರಕ್ತದಾನ ಶಿಬಿರ ಕೂಡ ಏರ್ಪಡಿಸಲಾಗಿ ದಾನಿಗಳು ರಕ್ತದಾನ ಮಾಡಿದರು.