*ಗೋಣಿಕೊಪ್ಪ, ಫೆ. ೮: ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯನವರಿಗೆ ವೀರಾಜಪೇಟೆ ಶೈಕ್ಷಣಿಕ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಬಳಗದಿಂದ ಸನ್ಮಾನ ಮಾಡಲಾಯಿತು.
ಕರ್ನಾಟಕ ರಾಜ್ಯ ಸರ್ಕಾರದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯನವರಿಗೆ ರಾಜ್ಯ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ನೀಡಿ ರಾಜ್ಯಪಾಲರು ಆದೇಶಿಸಿರುವ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಬಳಗದಿಂದ ಕೋಣನಕಟ್ಟೆಯಲ್ಲಿರುವ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.
ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪುಗ್ಗೆರ ಪ್ರವೀಣ್, ಕೊಡಗು ಜಿಲ್ಲಾ ಅನುದಾನಿತ ಶಾಲಾ ಕಾಲೇಜು ನೌಕರರ ಸಂಘದ ಅಧ್ಯಕ್ಷ ಪಡಿಞರಂಡ ಪ್ರಭುಕುಮಾರ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವ ಕಾರ್ಯದರ್ಶಿಗಳಾದ ತಿರುನೆಲ್ಲಿಮಾಡ ರಮಾನಂದ, ವೀರಾಜಪೇಟೆ ಶೈಕ್ಷಣಿಕ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಡೆಪAಡ ತಮ್ಮಯ್ಯ, ವೀರಾಜಪೇಟೆ ಶೈಕ್ಷಣಿಕ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಖಜಾಂಚಿ ಮಲ್ಲಂಗಡ ಸತ್ಯ, ನಿವೃತ್ತ ಶಿಕ್ಷಕ ಎ.ವಿ ಮಂಜುನಾಥ್ ಸೇರಿದಂತೆ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಹಾಜರಿದ್ದರು.