ವೀರಾಜಪೇಟೆ, ಫೆ. ೮: ಮೀನುಗಾರಿಕೆ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಶಾಸಕರ ಗೃಹ ಕಚೇರಿಯಲ್ಲಿ ವೀರಾಜಪೇಟೆ ಶಾಸಕರ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಿತರಿಸಿದರು.

ಮತ್ಸಾö್ಯಶ್ರಯ ಯೋಜನೆಯಡಿಯಲ್ಲಿ ಮನೆ ನಿರ್ಮಾಣ, ಮೀನು ಹಿಡಿಯಲು ಬೇಕಾಗುವಂತಹ ಎಲ್ಲಾ ಸೌಲಭ್ಯಗಳು ಹಾಗೂ ಮೀನು ಸಾಕಾಣಿಕೆಗಾಗಿ ಮೀನಿನ ಮರಿಗಳನ್ನು ವಿತರಿಸಲಾಯಿತು.

ಬಳಿಕ ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಸರಕಾರ ಬಡಜನರ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದು, ಇದರ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭ ಮತ್ಸಾö್ಯಶ್ರಯ ಯೋಜನೆಯಡಿ ಮನೆ ಸವಲತ್ತು ಪಡೆದ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿದರು. ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪಕ್ಷದ ಮುಖಂಡರು, ಕಾರ್ಯಕರ್ತರು, ಅರ್ಹ ಫಲಾನುಭವಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.