ಪಾಲಿಬೆಟ್ಟ, ಫೆ. ೮: ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಬೆಂಗಳೂರು, ಜೆ.ಸಿ.ಐ. ಗೋಕಾಕ ಹಾಗೂ ಶ್ರೀ ವಿವೇಕಾನಂದ ಯೋಗ ಮತ್ತು ಸಂಸ್ಕೃತಿ ವಿಕಾಸ ಸಂಘದ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೧೬೩ನೇ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಲಾದ ೪ನೇ ಕರ್ನಾಟಕ ರಾಜ್ಯ ಯೋಗಾಸನ ಸ್ಪೋರ್ಟ್ಸ್ ಲೀಗ್-೨೦೨೬ ಸ್ಪರ್ಧೆಗಳು ಫೆಬ್ರವರಿ ೧ ರಂದು ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆÀದವು. ಈ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಚೆಶೈರ್ ಹೋಮ್ ವಿಶೇಷ ಶಾಲೆಯ ಮೂರು ವಿಶೇಷಚೇತನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಂಸನೀಯ ಸಾಧನೆ ಮೆರೆದಿದ್ದಾರೆ. ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ. ಅವರು ಪ್ರಥಮ ಸ್ಥಾನ, ವಿಕಾಸ್ ತಿಮ್ಮಯ್ಯ ದ್ವಿತೀಯ ಸ್ಥಾನ ಹಾಗೂ ಮಂಜುನಾಥ್ ಎಂ.ಕೆ. ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿಶೇಷ ಶಿಕ್ಷಕರು ಹಾಗೂ ಯೋಗ ಶಿಕ್ಷಕರಾದ ಶಿವರಾಜ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದರು.