ಕಣಿವೆ, ಫೆ. ೯: ಸುಮಾರು ೩೦ ವರ್ಷಗಳಿಗೂ ಹೆಚ್ಚು ಕಾಲ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ನೀರು ಗಂಟಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಬಸವನಹಳ್ಳಿ ಗ್ರಾಮದ ಬೋಜಪ್ಪ ಹಾಗೂ ಗುಡ್ಡೆಹೊಸೂರು ಗ್ರಾಮದ ನಂಜಪ್ಪ ಅವರನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಪಿಡಿಓ ಸುಮೇಶ್, ಪಂಚಾಯಿತಿ ಉಪಾಧ್ಯಕ್ಷ ಪ್ರವೀಣ್ ಕುಮಾರ್, ಆಡಳಿತ ಮಂಡಳಿ ಸದಸ್ಯರು ಹಾಗೂ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.