ಕರಿಕೆ, ಫೆ.೯: ಇಲ್ಲಿಗೆ ಸಮೀಪದ ಚೆತ್ತುಕಾಯದ ದೊಡ್ಡಕೇರಿಯಲ್ಲಿ ಚಿರತೆಯೊಂದು ಸಾಕು ನಾಯಿಯನ್ನು ಬಲಿ ಪಡೆದ ಘಟನೆ ನಡೆದಿದೆ. ಇಲ್ಲಿನ ನಿವಾಸಿ ವೆಂಕಟರಮಣ ಎಂಬವರ ಮನೆ ಹಿತ್ತಲಿನಲ್ಲಿ ಕಟ್ಟಿ ಹಾಕಿದ್ದ ನಾಯಿ ಮೇಲೆ ದಾಳಿ ಮಾಡಿ, ಕೊಂದು ಅರ್ಧ ಭಾಗವನ್ನು ತಿಂದು ಹಾಕಿದೆ.
ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಚಿರತೆ ದಾಳಿ ಮಾಡಿ ಸಾಕು ನಾಯಿಗಳನ್ನು ಬೇಟೆಯಾಡುತ್ತಿದ್ದು ಅರಣ್ಯ ಇಲಾಖೆ ಬೋನ್ ಇರಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಚಿರತೆಯನ್ನು ಸೆರೆ ಹಿಡಿಯಲು ಗ್ರಾಮಸ್ತರು ಆಗ್ರಹಿಸಿದ್ದಾರೆ.