ಮಡಿಕೇರಿ, ಫೆ. ೯: ಕರ್ನಾಟಕ ರಾಜ್ಯ ದÀಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ನಡೆಯಿತು.

ವಿಶ್ವವಿದ್ಯಾನಿಲಯ ಅನುದಾನ ಆಯೋಗ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಮಾನತೆ ಪ್ರೋತ್ಸಾಹಿಸಲು ತಂದಿರುವ ನಿಯಾವಳಿಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು, ರೋಹಿತ್ ವೇಮುಲ ಕಾಯಿದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಬೇಕು, ಜಾತಿ, ಧರ್ಮ ತಾರತಮ್ಯ ತಡೆಗಟ್ಟಲು ಯುಜಿಸಿ ನಿಯಮವನ್ನು ಕೇಂದ್ರ ಸರಕಾರ ಕೂಡಲೇ ಜಾರಿಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಡಿಕೇರಿಯ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ದಸಂಸ ಸದಸ್ಯರು ಪ್ರತಿಭಟನೆ ನಡೆಸಿ ಹಕ್ಕೊತ್ತಾಯ ಮಂಡಿಸಿದರು. ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಸಂಚಾಲಕ ಎನ್.ಆರ್. ದೇವರಾಜು, ಜಿಲ್ಲಾ ಸಂಘಟನಾ ಸಂಚಾಲಕರಾದ ಎನ್.ಸಿ. ಗೋವಿಂದರಾಜು, ಡಿ.ಆರ್. ಕೆಂಚೇಶ್ವರ್, ಪ್ರಮುಖರಾದÀ ಹರೀಶ್, ಬಿ.ಬಿ. ಕೇಶವ, ವಸಂತ, ಮಹಿಳಾ ಘಟಕದ ಸಂಚಾಲಕಿ ಕೆ.ಕೆ. ಭಾಗ್ಯ, ವೇದಾವತಿ ಸೇರಿದಂತೆ ಇನ್ನಿತರರು ಹಾಜರಿದ್ದರು.