ಮಡಿಕೇರಿ, ಫೆ. ೯: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ೨೦೨೫-೨೬ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ ೧೮ ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಗಳಾದ ಯಾವುದಾದರು ಒಂದು ವಿಶೇಷ ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆ ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರ ಒಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ತಾ. ೨೦ ರೊಳಗೆ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸುವುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಯನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಈ ಪ್ರಶಸ್ತಿಯ ಅರ್ಜಿ ನಮೂನೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೨೭೨-೨೨೮೦೧೦ಗೆ ಸಂಪರ್ಕಿಸಬಹುದು.
ಕೇAದ್ರ ಕಚೇರಿ ವಿಳಾಸ: ಯೋಜನಾಧಿಕಾರಿಗಳು ಚಂದ್ರಿಕಾ ಲೇಔಟ್ ಹಿಂಭಾಗ ಕೆ.ಹೆಚ್.ಬಿ. ಕಾಲೋನಿ ಲಕಮನಹಳ್ಳಿ ಧಾರವಾಡ-೫೮೦೦೦೪, ದೂರವಾಣಿ ಸಂಖ್ಯೆ ೦೮೩೬-೨೪೬೫೪೯೦, ಹೆಚ್ಚಿನ ಮಾಹಿತಿಗೆ ದೂ.ಸಂ. ೮೦೫೦೩೯೨೨೦೯, ೭೨೦೪೩೯೬೨೭೫, ೯೪೪೮೯೮೧೯೪೪ ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.