ಗೋಣಿಕೊಪ್ಪಲು, ಫೆ. ೯: ಗೋಣಿಕೊಪ್ಪ ಸಮೀಪದ ರ‍್ವತ್ತೊಕ್ಲುವಿನ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೀಡುವ ಕಾರ್ಯಕ್ರಮ ನಡೆಯಿತು. ವಿದ್ಯಾನಿಕೇತನ ಕಾಲೇಜಿನ ಪ್ರಾಂಶುಪಾಲ ಹರೀಶ್ ತಾಮನ್‌ಕರ್ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜೀವಶಾಸ್ತç ಉಪನ್ಯಾಸಕ ಎಸ್. ರಘುನಾಥ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ವಿದ್ಯಾಸಂಸ್ಥೆಯ ದ್ವಿತೀಯ ಪಿ.ಯು. ವಿದ್ಯಾರ್ಥಿಗಳಾದ ಹರಿಕೃಷ್ಣನ್ ಹಾಗೂ ಅನ್ವಿತಾ ತಮ್ಮ ವಿದ್ಯಾಭ್ಯಾಸದ ಅನುಭವಗಳನ್ನು ಹಂಚಿಕೊAಡರು. ವಿದ್ಯಾರ್ಥಿ ದೀಕ್ಷಿತ ಮತ್ತು ತಂಡ ಪ್ರಾರ್ಥಿಸಿ, ಕನ್ನಡ ಉಪನ್ಯಾಸಕ ಸಂತೋಷ್ ಕುಮಾರ್ ಸ್ವಾಗತಿಸಿ, ತೃಷ್ಯ ತಂಗಮ್ಮ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರಥಮ ಪಿಯು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.