ಸೋಮವಾರಪೇಟೆ, ಫೆ. ೯: ವಿದ್ಯಾರ್ಥಿ ಜೀವನದಲ್ಲಿ ಉನ್ನತ ಶಿಕ್ಷಣ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಂದು ವಿಷಯವನ್ನು ಆಳವಾಗಿ ಅಭ್ಯಾಸ ಮಾಡಬೇಕು ಎಂದು ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಹರ್ಷ ಹೇಳಿದರು.
ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪಿಯು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗು ಪ್ರೇರಣಾತ್ಮಕ ಭಾಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಿನಕ್ಕೆ ಒಂದು ಗಂಟೆ ದಿನಪ್ರತಿಕೆಗಳನ್ನು ಓದುವ ವಿದ್ಯಾರ್ಥಿಗಳು ಸಿಗುವುದು ಅಪರೂಪ. ಆದರೆ ಪ್ರತಿದಿನ ವ್ಯಾಟ್ಸಪ್, ಇನ್ಸ್ಟಾಗ್ರಾಂನ್ನು ನೋಡುವ ವಿದ್ಯಾರ್ಥಿಗಳು ಜಾಸ್ತಿಯಿದ್ದಾರೆ. ಆನ್ಲೈನ್ ಓದನ್ನು ಒಳ್ಳೆಯದಕ್ಕೆ ಬಳಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಮಾತನಾಡಿ, ಶಿಕ್ಷಣವೇ ಸಮಾಜದ ಬೆಳವಣಿಗೆಗೆ ಅಡಿಪಾಯವಾಗಿದ್ದು, ವಿದ್ಯಾರ್ಥಿಗಳು ಶಿಸ್ತಿನೊಂದಿಗೆ ಅಧ್ಯಯನ ಮಾಡಿ ಉತ್ತಮ ನಾಗರಿಕರಾಗಬೇಕು ಎಂದು ಹೇಳಿದರು.
ಸಂಸ್ಥೆಯ ಭಾತ್ಮೀದಾರ ಕೆ.ಎಂ. ಜಗದೀಶ್ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೊನ್ಸಾಲ್ವೆಸ್ ಮಾತನಾಡಿ, ಆತ್ಮವಿಶ್ವಾಸ, ನಿರಂತರ ಪರಿಶ್ರಮ ಮತ್ತು ಸಕಾರಾತ್ಮಕ ಚಿಂತನೆಯಿAದ ಯಾವುದೇ ಗುರಿಯನ್ನು ಸಾಧಿಸಬಹುದು ಎಂದು ತಿಳಿಸಿದರು.
ಉತ್ತಮ ಕ್ರೀಡಾಪಟು ಪ್ರಶಸ್ತಿಯನ್ನು ವಿಜ್ಞಾನ ವಿಭಾಗದಲ್ಲಿ ಎಚ್.ಆರ್.ಜೀವಿತ, ಭಗತ್, ವಾಣಿಜ್ಯ ವಿಭಾಗದಲ್ಲಿ ಸಿ.ಇ.ಆಶಿತ್, ಕೆ.ಎಸ್.ಮೋನಿಷಾ, ಅತೀ ಹೆಚ್ಚು ಅಂಕಪಡೆದವರ ಪ್ರಶಸ್ತಿಯನ್ನು ವಿಜ್ಞಾನ ವಿಭಾಗದಲ್ಲಿ ಇಬ್ಬನಿ, ಪವನ್, ವಾಣಿಜ್ಯ ವಿಭಾಗದಲ್ಲಿ ಮೋನಿಷಾ ಜಿ.ಜಿ. ಭುವನೇಶ್ ಪಡೆದುಕೊಂಡರು. ಆಲ್ರೌಂಡರ್ ಪ್ರಶಸ್ತಿಯನ್ನು ವಾಣಿಜ್ಯ ವಿಭಾಗದ ಹನಿ ಪಡೆದುಕೊಂಡರು. ಕ್ರೀಡಾಕ್ಷೇತ್ರದಲ್ಲಿ ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿನಿಯರಾದ ಬಿ.ಜಿ.ವೈಭವಿ, ಅಸೀನಾ, ಎಚ್.ಆರ್.ದಿಶಿತಾ, ಸಿ.ಎಚ್.ಭೂಮಿಕ, ಉಪನ್ಯಾಸಕಿಯರಾದ ಆಪಾಡಂಡ ಮೌನ, ಸೌಮ್ಯ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.