ವೀರಾಜಪೇಟೆ, ಫೆ. ೮: ವಿದ್ಯಾರ್ಥಿಗಳಿಗೆ ವಿವಿಧತೆಯಲ್ಲಿ ಏಕತೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ವೀರಾಜಪೇಟೆ ಕಾವೇರಿ ಶಾಲೆಯಲ್ಲಿ ನರ್ಸರಿ ವಿಭಾಗದ ವಿದ್ಯಾರ್ಥಿಗಳೊಂದಿಗೆ ಜನಾಂಗೀಯ ದಿನವನ್ನು ಸಂಭ್ರಮದಿAದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪೋಷಕರು ತಮ್ಮ ಮಕ್ಕಳೊಂದಿಗೆ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ಉತ್ಸಾಹದಿಂದ ಭಾಗವಹಿಸಿದ್ದರು.
ಈ ಸಂದರ್ಭ ಪೋಷಕರಿಗೆ ಮನೋರಂಜನಾ ಕ್ರೀಡೆಯನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಲಾಯಿತು. ಆಡಳಿತ ಮಂಡಳಿ ಅಧ್ಯಕ್ಷ ಸುದೇಶ್ ಬಿ.ಎಸ್., ಕಾರ್ಯದರ್ಶಿ ವಿನೋದ್ ಪಿ.ಎನ್., ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು., ಸಂಯೋಜಕಿ ಅಮೃತ ಅರ್ಜುನ್, ಸಹ ಶಿಕ್ಷಕಿ ಲೀನಾ, ಗಂಗಾ ಬೋಧಕ - ಬೋಧಕೇತರ ವೃಂದದವರು ಹಾಜರಿದ್ದರು.