ಐಗೂರು, ಫೆ. ೯: ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಹಾಗೂ ತಾಲೂಕು ಘಟಕದ ನೇತೃತ್ವದಲ್ಲಿ, ಐಗೂರು ಘಟಕದ ಆಶ್ರಯದಲ್ಲಿ ಸ್ಥಳೀಯ ಕಾಜೂರು ಸರ್ಕಾರಿ ಶಾಲಾ ಮೈದಾನದಲ್ಲಿ ನಡೆದ ೯ನೇ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖವಾಗಿ ೮ ನಿರ್ಣಯಗಳನ್ನು ಅಂಗೀಕರಿಸಲಾಯಿತು.
ಕಸಾಪ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಎ.ಪಿ. ವೀರರಾಜು ಅವರು ಬಹಿರಂಗ ಅಧಿವೇಶನದಲ್ಲಿ ನಿರ್ಣಯ ಮಂಡಿಸಿದರು. ಪ್ರವಾಸಿಗರ ನೆಚ್ಚಿನ ತಾಣಗಳಾದ ಕಿರಗಂದೂರು ಗ್ರಾಮದ ಮಕ್ಕಳ ಗುಡಿ ಬೆಟ್ಟ ಸ್ಕೆöÊವಾಕ್ ನಿರ್ಮಾಣಕ್ಕೆ ಸೂಕ್ತ ಸ್ಥಳವಾಗಿದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವಾಗಿ ಅಭಿವೃದ್ಧಿಗೊಳಿಸಬೇಕು.
ಮಲ್ಲಳ್ಳಿ ಜಲಪಾತ ಮತ್ತು ಹೊನ್ನಮ್ಮನ ಕೆರೆ ಪ್ರವಾಸಿ ತಾಣಗಳಲ್ಲಿ ರೋಪ್ ವೇ ನಿರ್ಮಿಸಲು ಸೂಕ್ತವಾಗಿದ್ದು, ಅದನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು. ಎಡವಾರೆ ಹಾರಂಗಿ ಜಲಾಶಯ ಹಿನ್ನೀರಿನಲ್ಲಿ ದೋಣಿ ವಿಹಾರ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ಚನ್ನರಾಯಪಟ್ಟಣ, ಅರಕಲಗೂಡು, ಸೋಮವಾರಪೇಟೆ, ಮಡಿಕೇರಿ, ವೀರಾಜಪೇಟೆ, ಕಣ್ಣೂರು ರಾಜ್ಯ ಹೆದ್ದಾರಿಯನ್ನು ರಾಷ್ಟಿçÃಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಬೇಕು. ತಾಲೂಕಿನ ಗಡಿ ಗ್ರಾಮ ಪಂಚಾಯಿತಿಗಳಾದ ಗರ್ವಾಲೆ ಮತ್ತು ಬೆಟ್ಟದಳ್ಳಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಮಾದಾಪುರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆರೆಯಬೇಕು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬಹುತೇಕ ಸಿಬ್ಬಂದಿಗಳು ಅನ್ಯಭಾಷಿಕರಾಗಿದ್ದು, ವ್ಯವಹಾರಸ್ಥರಿಗೆ ಇದರಿಂದ ತೊಂದರೆಯಾಗಿದೆ. ಹೀಗಾಗಿ ಸಿಬ್ಬಂದಿಗಳು, ತ್ರಿಭಾಷಾ ಸೂತ್ರದಂತೆ ಕನ್ನಡಲ್ಲಿಯೇ ವ್ಯವಹರಿಸಲು ಕ್ರಮ ಕೈಗೊಳ್ಳಬೇಕು.
ಮಾದಾಪುರ, ಗರ್ವಾಲೆ ಮತ್ತು ಹರದೂರು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡAತೆ ಮಾದಾಪುರ ಕೇಂದ್ರವನ್ನಾಗಿಟ್ಟುಕೊAಡು ಪ್ರತ್ಯೇಕ ಕಂದಾಯ ಹೋಬಳಿಯನ್ನು ಮಾಡಲು ಕ್ರಮ ಕೈಗೊಳ್ಳಬೇಕೆಂದು ನಿರ್ಣಯ ಅಂಗೀಕರಿಸಲಾಯಿತು. ಬಹಿರಂಗ ಅಧಿವೇಶನದ ನಿರ್ಣಯಗಳನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಿದ್ದರು. ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷೆ ಜಲಜಾ ಶೇಖರ್, ಕಸಾಪ ಮಾಜೀ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್, ಐಗೂರು ಘಟಕದ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್, ತಾಲೂಕು ಕೋಶಾಧಿಕಾರಿ ಕೆ.ಪಿ. ದಿನೇಶ್ ಅವರುಗಳು ಉಪಸ್ಥಿತರಿದ್ದರು. -ಸುಕುಮಾರ್