ಕೂಡಿಗೆ, ಫೆ. ೯: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೦೯ರ ಸರ್ವೆ ನಂಬರ್‌ನ ಹುಲುಸೆ ಮತ್ತು ರಾಂಪುರ ವ್ಯಾಪ್ತಿಯ ಕೆರೆ ಒತ್ತುವರಿಗೆ ಸಂಬAಧಿಸಿದAತೆ ಈಗಾಗಲೇ ಕಂದಾಯ ಇಲಾಖೆ ವತಿಯಿಂದ ಸರ್ವೆ ನಡೆಸಿ ಗುರುತಿಸಲಾಗಿರುವ ಕೆರೆಯ ಜಾಗವನ್ನು ತೆರವುಗೊಳಿಸಲು ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧಿಕಾರಿ ವರ್ಗದವರು ಕಾರ್ಯೋನ್ಮುಖರಾಗಿದ್ದಾರೆ.

ಕಂದಾಯ ಇಲಾಖೆ ವತಿಯಿಂದ ನಡೆದ ಸರ್ವೆ ಕಾರ್ಯದ ಸಂದರ್ಭದಲ್ಲಿ ಸ್ವಲ್ಪ ಸಮಯ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಇದೀಗ ಸ್ವಯಂ ಪ್ರೇರಿತರಾಗಿ ಮುಂದಾದ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕೆರೆಯ ಜಾಗವನ್ನು ಗುರುತಿಸಿ ಅಧಿಕಾರಿ ವರ್ಗದವರು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭ ಅಭಿವೃದ್ಧಿ ಅಧಿಕಾರಿ ರವಿಕುಮಾರ್, ಸಿಬ್ಬಂದಿ ವರ್ಗದವರು ಇದ್ದರು.