ಕೂಡಿಗೆ, ಫೆ.೯: ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ಪರೀಕ್ಷಾ ಕಾರ್ಯಾಗಾರ ನಡೆಯಿತು.
ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲೆಯ ಜಲ-ಜೀವನ್ ಮಿಷನ್ (ಎಎಒ) ಯೋಜನೆಯಡಿ ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಿಗೆ ಮತ್ತು ಯು.ಡಬ್ಲೂö್ಯ.ಎಸ್.ಸಿ ಸಮಿತಿ ಸದಸ್ಯರಿಗೆ ಹಾಗೂ ಆಶಾ-ಅಂಗನವಾಡಿ ಕಾರ್ಯಕರ್ತರಿಗೆ ಎಫ್.ಟಿ.ಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ತರಬೇತಿ ಕಾರ್ಯಾಗಾರವನ್ನು ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸೋಮವಾರಪೇಟೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ ಕುಮಾರ್, ನೆರವೇರಿಸಿದರು. ನಂತರ ಮಾತನಾಡಿದ ಅವರು, ಕುಡಿಯುವ ನೀರು ಸರಬರಾಜು ವ್ಯವಸ್ಥೆಯ ಸಂದರ್ಭದಲ್ಲಿ ಶುದ್ಧ ನೀರನ್ನು ಗ್ರಾಮಗಳಿಗೆ ಒದಗಿಸುವ ಸಂದರ್ಭದಲ್ಲಿ ನಿಯಮಾನುಸಾರ ಪರೀಕ್ಷೆ ನಡೆಸಿ ಸರಬರಾಜು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಶ್ರೀನಿವಾಸ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ವೀರೇಂದ್ರ, ಕೂಡಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ, ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ರವೀಶ್, ಜೆ.ಜೆ.ಎಂ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಪುಟ್ಟಸ್ವಾಮಿ ಹಾಗೂ ಕುಶಾಲನಗರ ತಾಲೂಕು ವ್ಯಾಪ್ತಿಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿ, ಜೆ.ಜೆ.ಎಂ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.