ಕುಶಾಲನಗರ, ಫೆ. ೯: ಕುಶಾಲನಗರ ತಾಲೂಕು ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಕುಶಾಲನಗರ ವಾಸವಿ ಮಹಲ್ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆ ಅಧ್ಯಕ್ಷರಾದ ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಉದ್ಘಾಟಿಸಿ ಮಾತನಾಡಿದರು.
ರಕ್ತದಾನ ಕಾರ್ಯ ಶ್ರೇಷ್ಠ ಕಾರ್ಯವಾಗಿದ್ದು, ಆ ಮೂಲಕ ಇನ್ನೊಬ್ಬರಿಗೆ ಜೀವದಾನ ಮಾಡುವ ಅವಕಾಶವಿದೆ. ಪ್ರತಿಯೊಬ್ಬರೂ ಇಂತಹ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಕುಶಾಲನಗರ ತಾಲೂಕು ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಎಸ್.ಕೆ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ತನಿಧಿ ಕೇಂದ್ರದ ಮುಖ್ಯಸ್ಥರಾದ ಡಾ.ಕರುಂಬಯ್ಯ ಅವರು ರಕ್ತದಾನದ ಮಹತ್ವದ ಬಗ್ಗೆ ಮಾತನಾಡಿದರು.
ಡಾ.ಕರುಂಬಯ್ಯ ಅವರ ನೇತೃತ್ವದಲ್ಲಿ ಕೇಂದ್ರದ ವೈದ್ಯರು, ಸಿಬ್ಬಂದಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ರಕ್ತದಾನದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಕುಶಾಲನಗರ ತಾಲೂಕು ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಕೆ.ಪಿ ಚಂದ್ರಶೇಖರ್, ಪ್ರಮುಖರಾದ ಅಂಜನ್, ಹೆಚ್.ಎಂ ಚಂದ್ರು, ಓಬಳ ರೆಡ್ಡಿ, ಕೆ.ಎನ್ ದೇವರಾಜ್, ಮುನಿಸ್ವಾಮಿ, ಜಗದೀಶ್, ರಾಜೇಗೌಡ ಮತ್ತು ಇತರರು ಇದ್ದರು.