ಸೋಮವಾರಪೇಟೆ, ಫೆ. ೯: ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನು ಡಿ. ಗ್ರೂಪ್ ನೌಕರರೆಂದು ಬಜೆಟ್‌ನಲ್ಲಿ ಅನುಮೋದನೆ ಮಾಡಬೇಕೆಂದು ಕರ್ನಾಟಕ ರಾಜ್ಯ ಗ್ರಾಮ ಸಹಾಯಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಾದ್ಯಂತ ೧೦,೪೫೦ ಗ್ರಾಮ ಸಹಾಯಕರು ಕರ್ತವ್ಯ ನಿರ್ವಹಿಸುತ್ತಿದ್ದು, ಇವರನ್ನು ಡಿ. ಗ್ರೂಪ್ ನೌಕರರೆಂದು ಪರಿಗಣಿಸಿ, ಕೆಲಸವನ್ನು ಖಾಯಂಗೊಳಿಸಲು ಬಜೆಟ್‌ನಲ್ಲಿ ಅನುಮೋದನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ಎಸ್.ಜೆ. ಸೋಮಶೇಖರ್ ಅವರ ಮುಖಾಂತರ ಮುಖ್ಯಮಂತ್ರಿ, ಕಂದಾಯ ಸಚಿವರಿಗೆ, ಸಂಘದ ಜಿಲ್ಲಾಧ್ಯಕ್ಷ ಹೆಚ್.ಸಿ. ಸುರೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.