ಸಿದ್ದಾಪುರ, ಫೆ. ೧೦: ನೆಲ್ಲಿಹುದಿಕೇರಿಯ ನೂತನ ಗ್ರಾ.ಪಂ ಕಟ್ಟಡವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ನೆಲ್ಲಿಹುದಿಕೇರಿ ಗ್ರಾಮಕ್ಕೆ ಅನುದಾನ ನೀಡುವುದು ನನ್ನ ಕರ್ತವ್ಯವಾಗಿದೆ ಎಂದರು. ಸಾರ್ವಜನಿಕ ಸೇವೆಯನ್ನು ಕತ್ತು ಬಗ್ಗಿಸಿ ಮಾಡಬೇಕೆಂದು ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಕಚೇರಿ ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಬೇಕು. ಸರಕಾರಿ ಕಟ್ಟಡಗಳಲ್ಲಿ ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ಕಡಿಮೆಗೊಳಿಸುವಲ್ಲಿ ಕ್ರಮ ವಹಿಸಬೇಕು. ಕಾವೇರಿ ನದಿಗೆ ನೇರವಾಗಿ ತ್ಯಾಜ್ಯಗಳನ್ನು ಹರಿಸುತ್ತಿರುವ ಹಿನ್ನೆಲೆಯಲ್ಲಿ ನೆಲ್ಯಹುದಿಕೇರಿ ಗ್ರಾ.ಪಂ.ಗೆ ಮಾಲಿನ್ಯ ಮಂಡಳಿಯಿAದ ನೋಟೀಸ್ ನೀಡುವ ಸಾಧ್ಯತೆ ಇದ್ದು, ಈ ಸಂಬAಧ ಗ್ರಾ.ಪಂ ಸೂಕ್ತ ಕ್ರಮವಹಿಸಬೇಕೆಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಮಡಿಕೇರಿ ಕ್ಷೇತ್ರದ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಈಗಾಗಲೇ ಎರಡು ಕೋಟಿ ಹಣವನ್ನು ಅನುದಾನವಾಗಿ ನೀಡಿರುವುದು ಗಮನಾರ್ಹ ಎಂದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಮಡಿಕೇರಿ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಬಿಡುವಿಲ್ಲದೆ ದುಡಿಯುತ್ತಿದ್ದಾರೆ ಎಂದರು.

ಈ ಸಂದರ್ಭ ಜಿಲ್ಲಾ ಕೆ .ಡಿ. ಪಿ. ಸದಸ್ಯೆ ಸುನಿತಾ ಮಂಜುನಾಥ್, ಮಾಜಿ ಗ್ರಾ.ಪಂ ಅಧ್ಯಕ್ಷರುಗಳಾದ ಸಾಬು ವರ್ಗೀಸ್, ಧನಲಕ್ಷಿö್ಮÃ, ಮಾಜಿ ಗ್ರಾ.ಪಂ ಉಪಾಧ್ಯಕ್ಷೆ ಪ್ರಮಿಳ, ಶಿಕ್ಷಣ ಸುಧಾರಣಾ ಸಮಿತಿ ಸದಸ್ಯ ಕೆ. ಎಂ. ಬಶೀರ್, ಯುವ ಕಾಂಗ್ರೆಸ್ ಮುಖಂಡ ಸಂಶುದ್ದಿನ್ ಹಾಗೂ ಗ್ರಾ.ಪಂ ಮಾಜಿ ಸದಸ್ಯರುಗಳು ಸೇರಿದಂತೆ ಇನ್ನಿತರರು ಹಾಜರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂಜುAಡಸ್ವಾಮಿ ಸ್ವಾಗತಿಸಿದರು. ಶಿಕ್ಷಕಿ ಆಶಾ ಕಾರ್ಯಕ್ರಮ ನಿರೂಪಿಸಿದರು. ಕೆ.ಪಿ.ಎಸ್ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.