ಸುಂಟಿಕೊಪ್ಪ, ಫೆ. ೧೦: ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್, ಪ್ರಸ್ತುತ ದಿನಗಳಲ್ಲಿ ಖಾಸಗಿ ಶಾಲೆಗಳು ಮತ್ತು ಆಂಗ್ಲ ಮಾಧ್ಯಮ ವ್ಯಾಮೋಹದ ಹಿನ್ನಲೆಯಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ಕೇಳುವವರು ಇಲ್ಲ ಎಂಬAತಾಗಿದೆ ಎಂದು ವಿಷಾದಿಸಿದರು.

ಮತ್ತೋರ್ವ ಮುಖ್ಯ ಅತಿಥಿ ಮಾಜಿ ಸಚಿವ ಎಂ.ಪಿ ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯದಲ್ಲಿ ಜೆ.ಎಚ್ ಪಟೇಲ್ ಅವರ ಅವಧಿಯಲ್ಲಿ ಮೊರಾರ್ಜಿ ವಸತಿ ಶಾಲೆ ಆರಂಭವಾದಾಗ ಬಸವನಹಳ್ಳಿಯಲ್ಲಿ ಮತ್ತು ಬಿ.ಎಸ್ ಯಡಿಯೂರಪ್ಪ ಅವಧಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ಆರಂಭಿಸಿದಾಗ ಕೊಡ್ಲಿಪೇಟೆಯಲ್ಲಿ ಮೊರಾರ್ಜಿ ವಸತಿ ಶಾಲೆಯನ್ನು ತೆರೆಯಲಾಯಿತು ಎಂದರು. ಗದ್ದೆಹಳ್ಳದ ಈ ಶಾಲೆಗೆ ಅನುಮತಿ ಕೊಡಿಸಿದ್ದನ್ನು ನೆನಪಿಸಿಕೊಂಡ ಅವರು ಇದೀಗ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭವಾಗುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ಮತ್ತೋರ್ವ ಅತಿಥಿ ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ ಲೋಕೇಶ್ ಕುಮಾರ್ ಮಾತನಾಡಿ , ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಗೊಳ್ಳುತ್ತಿದ್ದು, ಇದು ಶಾಲೆಯ ಉಜ್ವಲ ಭವಿಷ್ಯಕ್ಕೆ ಮುನ್ನುಡಿಯಾಗಲೆಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಜಿ.ಪಂ ಮಾಜಿ ಸದಸ್ಯ ಬಿ.ಬಿ.ಭಾರತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್ ಸುನಿಲ್‌ಕುಮಾರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ ಲೋಕೇಶ್, ಪಂಚಾಯಿತಿ ಸದಸ್ಯರುಗಳಾದ ಪಿ.ಎಫ್ ಸಬಾಸ್ಟೀನ್, ಮಂಜುಳಾ, ಗೀತಾ, ನಾಗರತ್ನ ಸುರೇಶ್, ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪಿ.ಆರ್ ಸುಕುಮಾರ್ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಮೊದಲಿಗೆ ಇ ರಾಜು ನೇತೃತ್ವದ ಕಲಾವಿದರ ತಂಡ ಜಾಗೃತಿ ಗೀತೆಗಳನ್ನು ಹಾಡಿತು. ಕೌಶಲ್ಯ ಮತ್ತು ತಂಡ ಪ್ರಾರ್ಥಿಸಿದರೆ, ಶಾಲಾ ವಿದ್ಯಾರ್ಥಿಗಳ ತಂಡದಿAದ ಸ್ವಾಗತ ನೃತ್ಯ ನಡೆಯಿತು. ಮುಖ್ಯೋಪಾಧ್ಯಾಯಿನಿ ಹೇಮ ಸ್ವಾಗತಿಸಿ, ಶಿಕ್ಷಕರುಗಳಾದ ಮಂಜುನಾಥ್ ಮತ್ತು ಮೀನಾ ಅವರು ನಿರೂಪಿಸಿ ವಂದಿಸಿದರು. ಕಾರ್ಯಕ್ರಮದ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.