ಮಡಿಕೇರಿ, ಫೆ. ೧೦: ಅನಿವಾರ್ಯ ಕಾರಣಗಳಿಂದ ನೆÀನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲನಗರ ರೈಲು ಯೋಜನೆಗೆ ಮರು ಚಾಲನೆ ನೀಡಬೇಕು, ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಮನವಿ ಮಾಡಿದ್ದಾರೆ. ಈ ಸಂಬAಧ ಪತ್ರ ಬರೆದಿರುವ ಸಂಸದರು, ಕೆಲವು ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಯೋಜನೆ ನಿಧಾನಗತಿಯಲ್ಲಿ ಸಾಗಿದೆ ಅಥವಾ ನನೆಗುದಿಗೆ ಬಿದ್ದಿದೆ. ಯೋಜನೆಗೆ ಚಾಲನೆ ನೀಡಬೇಕು ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಮೈಸೂರು (ಬೆಳಗೊಳ) - ಕುಶಾಲನಗರ (೮೯ ಕಿಮೀ) ಯೋಜನೆಯ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದರೂ ಕಾರಣಾಂತರಗಳಿAದ ಸ್ಥಗಿತಗೊಂಡಿದೆ.

ಕೊಡಗು ಜಿಲ್ಲೆಗೆ ಸೂಕ್ತ ರೈಲು ಸಂಪರ್ಕವಿಲ್ಲದೇ ಪ್ರವಾಸೋದ್ಯಮ ಮತ್ತು ತೋಟಗಾರಿಕೆ ಕ್ಷೇತ್ರಗಳ ಆರ್ಥಿಕತೆಗೆ ಭಾರಿ ತೊಂದರೆಯಾಗುತ್ತಿದೆ. ಸಂಪೂರ್ಣವಾಗಿ ಸ್ಯಾಚುರೇಟೆಡ್ ರಸ್ತೆ ಸಂಪರ್ಕದ ಮೇಲೆ ಬೆಳೆಗಾರರು ಅವಲಂಬಿತರಾಗಿದ್ದಾರೆ ಎಂದು ವಿವರಿಸಲಾಗಿದೆ ಈ ಯೋಜನೆಯು ಕೊಡಗು ಜಿಲ್ಲೆಗೆ ಸುಸ್ಥಿರ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೇರಳ ಅವಕಾಶ ಒದಗಿಸುತ್ತದೆ. ಕೃಷಿ-ತೋಟಗಾರಿಕೆ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ. ಈ ನಿಟ್ಟಿನಲ್ಲಿ ರೈಲ್ವೆ ಸಚಿವಾಲಯವು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಮನವಿಯನ್ನು ಸ್ವೀಕರಿಸಿರುವ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದ್ದಾರೆ.