ಮಡಿಕೇರಿ, ಫೆ. ೧೦: ಪೊನ್ನಂಪೇಟೆಯ ಸಂತ ಅಂತೋಣಿ ವಿದ್ಯಾಸಂಸ್ಥೆಯಲ್ಲಿ ೧೦ನೇ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಡಿಡಿಪಿಐ ಪಿ.ಆರ್ ಮಚ್ಚಡೋ ಭಾಗವಹಿಸಿದ್ದರು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಸಂಚಾಲಕರಾದ ಫಾ.ಮಾನ್ಯುವಲ್ ಡಿಸೋಜಾ, ಪ್ರಾಂಶುಪಾಲರಾದ ಶಂಭು ಕಾರ್ಯಪ್ಪ, ಮುಖ್ಯ ಶಿಕ್ಷಕಿ ರಜನಿ ಪಿ.ಎಸ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.