ಮಡಿಕೇರಿ, ಫೆ. ೧೦: ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಾಯೋಜಕತ್ವದಲ್ಲಿ ವೀರಾಜಪೇಟೆ ತಾಲೂಕು ಜಾನಪದ ಪರಿಷತ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಪೊನ್ನಂಪೇಟೆ ತಾಲೂಕು ಮಟ್ಟದ ಜಾನಪದ ಗ್ರಾಮೀಣ ಕ್ರೀಡೋತ್ಸವವನ್ನು ತಾ. ೧೨ ರಂದು (ನಾಳೆ) ವೀರಾಜಪೇಟೆಯಲ್ಲಿ ಆಯೋಜಿಸಲಾಗಿದೆ.

ವೀರಾಜಪೇಟೆಯ ತಾಲೂಕು ಮೈದಾನದಲ್ಲಿ ಬೆಳಿಗ್ಗೆ ೯.೩೦ ಗಂಟೆಗೆ ಕ್ರೀಡಾಕೂಟವನ್ನು ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದಾರೆ.

ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ, ವೀರಾಜಪೇಟೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಎಂ.ಕೆ. ದೇಚಮ್ಮ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಕಸಾಪದ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕಿ ಲೀಲಾವತಿ, ಪೊನ್ನಂಪೇಟೆ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ದಿಲನ್ ಚಂಗಪ್ಪ, ಪ್ರಧಾನ ಕಾರ್ಯದರ್ಶಿ ಗೀತಾ ನಾಯ್ದು, ವೀರಾಜಪೇಟೆ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಟೋಮಿ ಥಾಮಸ್, ಪ್ರಧಾನ ಕಾರ್ಯದರ್ಶಿ ರೆಜಿತಾ ಕಾರ್ಯಪ್ಪ, ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್, ಖಜಾಂಚಿ ಎಸ್.ಎಸ್. ಸಂಪತ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಾಜಪೇಟೆ ಯೋಜನಾಧಿಕಾರಿ ಪಿ. ಹರೀಶ್ ಉಪಸ್ಥಿತರಿರುತ್ತಾರೆ.

ಗ್ರಾಮೀಣ ಜಾನಪದ ಕ್ರೀಡಾಕೂಟದಲ್ಲಿ ಗೋಣಿಚೀಲ ಓಟ, ಹಗ್ಗಜಗ್ಗಾಟ, ಮಡಿಕೆ ಒಡೆಯುವುದು ಸೇರಿದಂತೆ ವೈವಿಧ್ಯಮಯ ಜಾನಪದ ಕ್ರೀಡಾ ಸ್ಪರ್ಧೆ ಆಯೋಜಿತವಾಗಿದೆ. ಸಮಾರೋಪ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಮಧ್ಯಾಹ್ನ ೧ ಗಂಟೆಗೆ ನಡೆಯಲಿದೆ ಎಂದು ಜಾನಪದ ಪರಿಷತ್ ಪ್ರಕಟಣೆ ತಿಳಿಸಿದೆ.