ಮಡಿಕೇರಿ, ಫೆ. ೧೧: ಆಹಾರ ಭದ್ರತಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎಚ್.ಕೃಷ್ಣ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಆಹಾರ ಇಲಾಖೆ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ದುರುಪಯೋಗ ಆಗದಂತೆ ತಡೆಯಬೇಕು. ಮಧ್ಯಾಹ್ನದ ಉಪಹಾರ ಯೋಜನೆಯನ್ನು ವಿದ್ಯಾರ್ಥಿಗಳಿಗೆ ಸರಿಯಾಗಿ ತಲುಪಿಸಬೇಕು. ಪೂರಕ ಪೌಷ್ಠಿಕ ಆಹಾರ ವಿತರಿಸಬೇಕೆಂದು ಸೂಚಿಸಿದರು. ಜಿಲ್ಲೆಯ ಹಾಡಿಗಳಲ್ಲಿರುವ ಮಕ್ಕಳಿಗೆ ಗುಣಮಟ್ಟದ ಪೌಷ್ಠಿಕ ಆಹಾರ ಪೂರೈಸಬೇಕು. ಅಪೌಷ್ಠಿಕತೆ ಉಂಟಾಗದAತೆ ಗಮನ ಹರಿಸುವುದು ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಕರ್ತವ್ಯವಾಗಿದೆ. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಅಪೌಷ್ಠಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿ ಪಡಿತರ ವಿತರಿಸುತ್ತಿದೆ. ಇವುಗಳ ಸಮರ್ಪಕ ಬಳಕೆ ಆಗಬೇಕು. ದುರ್ಬಲ ವರ್ಗಗಳಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸುವುದು ಅತೀ ಮುಖ್ಯವಾಗಿದೆ. ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳು, ಅಂಗನವಾಡಿ ಸೇರಿದಂತೆ ಎಲ್ಲೆಡೆ ಪೌಷ್ಠಿಕ ಆಹಾರ ಪೂರೈಕೆ ಆಗಬೇಕು.

ಸ್ವಚ್ಛತೆಗೆ ಒತ್ತು ನೀಡಬೇಕು. ಅಡುಗೆ ಕೋಣೆ ಮತ್ತು ಶೌಚಾಲಯವನ್ನು ಸ್ವಚ್ಛವಾಗಿಡಬೇಕು. ಸರಿಯಾದ ಸಮಯಕ್ಕೆ ಮಕ್ಕಳಿಗೆ ಆಹಾರ ನೀಡಬೇಕು. ಶಾಲಾ ಆವರಣದಲ್ಲಿ ಶುಚಿತ್ವಕ್ಕೆ ಗಮನ ಹರಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಅಂಗನವಾಡಿ, ಶಾಲೆಗಳು, ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಗ್ರಂಥಾಲಯದಲ್ಲಿ ಅಗತ್ಯ ಪುಸ್ತಕಗಳು ಇರಬೇಕು. ಕಂಪ್ಯೂಟರ್ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳು ಇರಬೇಕು ಎಂದು ಸಲಹೆ ನೀಡಿದರು.

ಸಮಿತಿ ಸದಸ್ಯ ಮಾರುತಿ ಮಾತನಾಡಿ, ಆಹಾರ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೂರ್ಗ್ಹನಿ ಹೆಸರಿನಲ್ಲಿ ನಕಲಿ ಜೇನುತುಪ್ಪ ಮಾರಾಟದ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಪರಿಶೀಲಿಸಬೇಕು ಎಂದರು.

ಸಮಿತಿ ಸದಸ್ಯರಾದ ಸುಮಂತ್ ರಾವ್, ವಿಜಯಲಕ್ಷ್ಮಿ, ರೋಹಿಣಿ ಪ್ರಿಯ, ಲಿಂಗರಾಜು ಕೋಟೆ ಅವರು ಆಹಾರ ಸುರಕ್ಷತೆ, ವಿದ್ಯಾರ್ಥಿಗಳಿಗೆ ಕಲಿಕಾ ಗುಣಮಟ್ಟ ಹೆಚ್ಚಳ, ಪೌಷ್ಠಿಕ ಆಹಾರ ವಿತರಣೆ ಸೇರಿದಂತೆ ಹಲವು ವಿಚಾರದ ಬಗ್ಗೆ ಸಲಹೆ ಸೂಚನೆ ನೀಡಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಆಹಾರ ಸುರಕ್ಷತೆ ಅಂಕಿತಾಧಿಕಾರಿ ಅನಿಲ್ ಧಾವನ್, ಆರ್‌ಸಿಹೆಚ್ ಅಧಿಕಾರಿ ಡಾ. ಮಧುಸೂದನ್, ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ಡಾ. ಸೋಮಶೇಖರ್, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಎಂ.ಭೀಮರಾಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೆಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ಎಚ್.ಆರ್. ರಮೇಶ್, ವಿಕಲಚೇತನ ಅಧಿಕಾರಿ ವಿಮಲಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪತ್ರಾಂಕಿತ ಅಧಿಕಾರಿ ಪಿ.ಟಿ. ಕವಿತಾ, ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಡಾ.ದಿವಾಕರ ಇತರರು ತಮ್ಮ ಇಲಾಖೆಗೆ ಸಂಬAಧಿಸಿದAತೆ ಮಾಹಿತಿ ನೀಡಿದರು.