ಶನಿವಾರಸಂತೆ, ಫೆ. ೧೦ ಸಮೀಪದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಗವಿಸಿದ್ಧೇಶ್ವರ ಸ್ವಾಮಿಯ ೩೮ನೇ ವರ್ಷದ ವಾರ್ಷಿಕ ಪೂಜೆ ಹಾಗೂ ಜಾತ್ರಾ ಮಹೋತ್ಸವ ತಾ.೧೬ ರಂದು ನಡೆಯಲಿದೆ. ಪ್ರತಿವರ್ಷ ಮಹಾಶಿವರಾತ್ರಿಯ ಮರುದಿನ ನಡೆಯುವ ಈ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಾರೆ. ಅಂದು ಬೆಳಿಗ್ಗೆ ೮ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ವಿಶೇಷ ಪೂಜೆ, ಅಭಿಷೇಕ, ಷೋಡೋಶೋಪಚಾರ, ಮಂಗಳಾರತಿ, ಪುಷ್ಪಾರ್ಚನೆ ನಡೆಯಲಿದೆ. ಪೂಜಾ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಬೆಂಗಳೂರಿನ ಕಾವೇರಿ ವಿದ್ಯಾಸಂಸ್ಥೆ ಸಂಸ್ಥಾಪಕ ದೇವರಾಜಪ್ಪ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಪ್ರಮುಖರಾದ ಎ.ಎಂ.ಶ್ರೀಧರ್, ಸಿ.ಪಿ.ಪುಟ್ಟರಾಜ್, ಧರ್ಮಪ್ಪ, ಎನ್.ಈ. ರಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ತಾ.೧೫ ರಂದು ಬೆಳಿಗ್ಗೆ ೮ ಗಂಟೆಯಿAದ ಮಕ್ಕಳು, ಪುರುಷರಿಗೆ ನಿಧಾನಗತಿಯ ಸೈಕಲ್-ಬೈಕ್ ಚಲಾಯಿಸುವ ಸ್ಪರ್ಧೆ, ಹಗ್ಗ ಜಗ್ಗಾಟ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಸಂಜೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಹಿರಿಯರಿಗೆ ಮಡಿಕೆ ಹೊಡೆಯುವ ಹಾಗೂ ಕೇರಂ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ತಾ.೧೬ ರ ಬೆಳಿಗ್ಗೆ ೧೦ ಗಂಟೆಯಿAದ ೧೨ ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳ ವಿವಿಧ ಸ್ಪರ್ಧೆಗಳು ನಡೆದು ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಮಧ್ಯಾಹ್ನ ೨-೩೦ ರಿಂದ ವಿಶೇಷ ಕಾರ್ಯಕ್ರಮದಲ್ಲಿ ಶಿಕ್ಷಕ ಕಿರಣ್ ಕುಮಾರ್ ಮತ್ತು ತೇಜಾವತಿ ತಂಡದವರ ಜಾನಪದ ಸಂಗೀತ ಕಾರ್ಯಕ್ರಮ ಹಾಗೂ ಹಿರಿಯ ಕಲಾವಿದರಿಂದ ಸಾಂಪ್ರದಾಯಿಕ ಪದಗಳ ಪ್ರಸ್ತುತಿ. ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ದೇವಾಲಯದಲ್ಲಿ ತಾ. ೧೩ ರ ಬೆಳಿಗ್ಗೆ ೮ ಗಂಟೆಯಿAದ ರುದ್ರಾಭಿಷೇಕ, ಗಣಹೋಮ, ನವಗ್ರಹ ಹೋಮ ಹಾಗೂ ಮಹಾ ಮೃತ್ಯುಂಜಯ ಹೋಮಗಳು ಯಡಿಯೂರು ನಂದೀಶ ಗುರೂಜಿ ವೈದಿಕ ನೇತೃತ್ವದಲ್ಲಿ ನಡೆಯಲಿವೆೆ. ತಾ.೧೪ ರಂದು ಬೆಳಿಗ್ಗೆ ೭.೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಪುರುಷರಿಗೆ ವಾಲಿಬಾಲ್ ಪಂದ್ಯಾವಳಿ ಹಾಗೂ ಮಹಿಳೆಯರಿಗೆ ಥ್ರೋಬಾಲ್ ಸ್ಪರ್ಧೆ ಹಾಗೂ ಹಿರಿಯರಿಗೆ ಕ್ರಿಕೆಟ್ ಪ್ರದರ್ಶನ ಪಂದ್ಯ ಏರ್ಪಸಲಾಗಿದೆ ಎಂದು ಗವಿಸಿದ್ಧೇಶ್ವರ ದೇವಾಲಯ ಸೇವಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.