ಮಡಿಕೇರಿ, ಫೆ. ೧೧: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆ ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫೬೮೧ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫೬೫೭ ಪ್ರಕರಣಗಳು ಇತ್ಯರ್ಥಗೊಂಡಿವೆÉ.

೨೦೨೫-೨೬ನೇ ಸಾಲಿನಲ್ಲಿ ೨೬೨ ಪ್ರಕರಣಗಳು ದಾಖಲಾಗಿ, ೨೪೨ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ ೨೪ ಪ್ರಕರಣಗಳು ಇತ್ಯರ್ಥದ ಹಂತದಲ್ಲಿದೆ.

ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ.೩,೭೫,೦೦೦ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೫-೨೬ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಬಿ.ಕೆ ರವೀಂದ್ರ ರೈ ಹಾಗೂ ಪ್ರಧಾನ ಕಾರ್ಯದರ್ಶಿಯವರಾದ ನಮಿತ ಆರ್.ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : ೯೮೮೦೯೮೫೯೩೯ ನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.