ಮಡಿಕೇರಿ, ಫೆ. ೧೧: ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟಿçÃಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು.
ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಜ. ತಿಮ್ಮಯ್ಯ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಇತರರ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವ ಸೌಂದರ್ಯ ತಜ್ಞರು ಕಳೆದ ಮೂರು ವರ್ಷಗಳಿಂದ ತಾವುಗಳು ಪಾಲ್ಗೊಂಡು ಕ್ರೀಡಾ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ಸಂಸ್ಥಾಪಕಿ ಹಾಗೂ ಗೌರವಾಧ್ಯಕ್ಷೆ ವನಿತಾ ಚಂದ್ರಮೋಹನ್ ಮಾತನಾಡಿ, ಕ್ರೀಡೆ ಮೂಲಕ ಪರಸ್ಪರ ಬಾಂಧವ್ಯ ಬೆಳೆಯಲು ಸಾಧ್ಯ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಹೊರತು ಗೆಲುವಲ್ಲ ಎಂದರು.
ಜಿಲ್ಲಾ ಅಧ್ಯಕ್ಷೆ ರತ್ನ ಯತೀಶ್ ಮಾತನಾಡಿದರು. ತಾಲೂಕು ಸಂಘಗಳ ತಂಡಗಳ ನಡುವೆ ಥ್ರೋ ಬಾಲ್, ಹಗ್ಗಜಗ್ಗಾಟ, ಶಾಟ್ ಪುಟ್, ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.
ಸಂಘದ ಉಪಾಧ್ಯಕ್ಷೆ ಮಿನಾಜ್ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಪವಿತ್ರ ರೈ, ಚೇತನ, ಸಂಘಟನಾ ಕಾರ್ಯದರ್ಶಿ ಸಂಧ್ಯಾ ರಂಜನ್, ಖಜಾಂಚಿ ವೈಭವಿ ಸಹ ಖಜಾಂಚಿ ತಾಜ್ ಮತ್ತು ತಾಲೂಕು ಅಧ್ಯಕ್ಷರುಗಳಾದ ಝಾನ್ಸಿರಾಜ್, ಪ್ರತಿಮಾ ನಾಗಮಣಿ, ಸುಮಿತ ವಾಸು ಮತ್ತು ಆಡಳಿತ ಮಂಡಳಿ ಸದಸ್ಯರು ಇದ್ದರು. ಸೋಮವಾರಪೇಟೆ ತಾಲೂಕು ಅಧ್ಯಕ್ಷೆ ಪ್ರತಿಮಾ ಸ್ವಾಗತಿಸಿದರು. ಜಿಲ್ಲಾ ಸಂಘದ ನಿರ್ದೇಶಕಿ ನವ್ಯ ನಿರೂಪಿಸಿದರು. ಮಡಿಕೇರಿ ತಾಲೂಕು ಉಪಾಧ್ಯಕ್ಷೆ ಸರಿತಾ ಈಶ ವಂದಿಸಿದರು.