ಮಡಿಕೇರಿ ಫೆ. ೧೧: ಮಡಿಕೇರಿ ತಾಲೂಕಿನ ಅರೆಕಾಡು ಹೊಸ್ಕೇರಿಯಲ್ಲಿ ಕೊಡವ ವೆಲ್ಫೇರ್ ಆ್ಯಂಡ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಕೊಡವ ಭವನದ ಉದ್ಘಾಟನಾ ಸಮಾರಂಭ ತಾ.೧೪ ರಂದು ನಡೆಯಲಿದೆ. ಅಸೋಸಿಯೇಷನ್ನ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭವನವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮೈಸೂರು, ಸಂಸದ ಯದುವೀರ್ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಹಾಗೂ ಬೆಳೆಗಾರ ನಡಿಕೇರಿಯಂಡ ಪಿ.ಮೋಹನ್ ಮಾಚಯ್ಯ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.