ಕೋವರ್ ಕೊಲ್ಲಿ ಇಂದ್ರೇಶ್
ಬೆAಗಳೂರು, ಫೆ. ೧೧: ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ ದಿನಾಂಕದಿAದ ೧೫ ತಿಂಗಳ ಅವಧಿ ಹೊರತುಪಡಿಸಿ ಯಾವುದೇ ಸಂದರ್ಭದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶವಿದೆ ಎಂದು ಹೈಕೋರ್ಟ್ ಮಂಗಳವಾರ ತಿಳಿಸಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಚಲ್ಡಿಗಾನಹಳ್ಳಿಯ ಗ್ರಾಮಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಂಬAಧಿಸಿದAತೆ ಗ್ರಾಮ ಪಂಚಾಯತ್ ಸದಸ್ಯರ ಮನವಿಯ ಮೇರೆಗೆ ಕೋಲಾರ ಉಪವಿಭಾಗದ ಉಪವಿಭಾಗಾಧಿಕಾರಿ ದಿನಾಂಕ ನಿಗದಿಪಡಿಸಿದ್ದ ಕ್ರಮ ಪ್ರಶ್ನಿಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಿ.ಎನ್. ಶ್ರೀನಿವಾಸ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಗ್ರಾಮ ಪಂಚಾಯತ್ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ ದಿನಾಂಕದಿAದ ೧೫ ತಿಂಗಳ ಆರಂಭಿಕ ಅವಧಿಯಲ್ಲಿ ಮಾತ್ರ ಅವಿಶ್ವಾಸ ನಿರ್ಣಯ ಮಂಡಿಸುವುದಕ್ಕೆ ಅವಕಾಶವಿರುವುದಿಲ್ಲ ೧೫ ತಿಂಗಳ ಬಳಿಕ ಯಾವುದೇ ಸಂದರ್ಭದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಆದರೆ, ಅರ್ಜಿದಾರರ ಪರ ವಕೀಲರು ವಾದ ಮಂಡಿಸಿರುವ ಅರ್ಜಿದಾರರು ಅಧ್ಯಕ್ಷರಾವಧಿಯ ಕೊನೆಯ ಹಂತದಲ್ಲಿ ಅವಿಶ್ವಾಸ ಮಂಡನೆ ಮಾಡುವುದಕ್ಕೆ ಸದಸ್ಯರು ಮುಂದಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ೧೫ ತಿಂಗಳ ಬಳಿಕ ಯಾವ ಸಂದರ್ಭದಲ್ಲಾದರೂ ಅವಿಶ್ವಾಸ ನಿರ್ಣಯ ಮಂಡಿಸಬಹುದಾಗಿದೆ. ಆದ್ದರಿಂದ ಅರ್ಜಿದಾರರ ವಾದ ಒಪ್ಪಲಾಗುವುದಿಲ್ಲ ಎಂದು ಪೀಠ ಹೇಳಿತು. ಅಲ್ಲದೆ, ಅವಧಿಯ ಅಂತ್ಯದ ವೇಳೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ಅನುಮತಿ ನೀಡುವುದರಿಂದ ಚುನಾಯಿತ ಪದಾಧಿಕಾರಿಗಳ ಉಳಿದ ಅಧಿಕಾರಾವಧಿ ದುರುಪಯೋಗವಾಗಲಿದೆ ಎನ್ನಲಾಗುವುದಿಲ್ಲ ಎಂದು ಪೀಠ ತಿಳಿಸಿದೆ. ಆದ್ದರಿಂದ ಸದಸ್ಯರ ಮನವಿಯ ಮೇರೆಗೆ ಅವಿಶ್ವಾಸ ನಿರ್ಣಯ ಅಂಗೀಕರಿಸುವ ಸಲುವಾಗಿ ಉಪವಿಭಾಗಾಧಿಕಾರಿಗಳು ಸಭೆ ನಡೆಸಲು ದಿನಾಂಕ ನಿಗದಿ ಮಾಡಿರುವುದಲ್ಲಿ ಯಾವುದೇ ದೋಷ ಕಂಡುಬAದಿಲ್ಲ ಎಂದು ತಿಳಿಸಿದ ನ್ಯಾಯಪೀಠ, ಹಣಕಾಸಿನ ಅವ್ಯವಹಾರ ಸಂಬAಧ ಅರ್ಜಿದಾರರ ಆರೋಪಕ್ಕೆ ಸಂಬAಧ ಪರಿಶೀಲನೆ ನಡೆಸುವುದಕ್ಕಾಗಿ ಸಕ್ಷಮ ಪ್ರಾಧಿಕಾರಕ್ಕೆ ರವಾನಿಸಬೇಕು. ಜತೆಗೆ, ಆದೇಶದ ಪ್ರತಿ ಸಿಕ್ಕ ಏಳು ದಿನಗಳ ಅಕ್ರಮ ಆರೋಪ ಸಂಬAಧ ಸೂಕ್ತ ಕ್ರಮ ಕೈಗೊಳ್ಳಬೇಕು ಗ್ರಾಮ ಪಂಚಾಯತ್‌ಗೆ ಸೂಚಿಸಿದೆ. ಸದಸ್ಯರ ಮನವಿ ಮೇರೆಗೆ ೨೦೨೬ರ ಜನವರಿ ೭ರಂದು ಅವಿಶ್ವಾಸ ನಿರ್ಣಯಕ್ಕೆ ಸಭೆ ನಡೆಸುವುದಕ್ಕಾಗಿ ಕೋಲಾರ ಉಪವಿಭಾಗದ ಉಪ ವಿಭಾಗಾಧಿಕಾರಿಗಳು ೨೦೨೫ರ ಡಿಸೆಂಬರ್ ೨೦ರಂದು ನೋಟಿಸ್ ಜಾರಿ ಮಾಡಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.