ಮಡಿಕೇರಿ, ಫೆ. ೧೧: ೨೦೨೩, ೨೦೨೪ ಹಾಗೂ ೨೦೨೫ ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ೬ ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ hಣಣಠಿ://sevಚಿsiಟಿಜhugs.ಞಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಪದವೀಧರರಿಗೆ/ ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು ರೂ.೩ ಸಾವಿರ ಹಾಗೂ ಡಿಪ್ಲೋಮಾ ಪಡೆದವರಿಗೆ ರೂ.೧೫೦೦ ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ೨ ವರ್ಷಗಳವರೆಗೆ ನೀಡಲಾಗುತ್ತದೆ ಮತ್ತು ಈಗಾಗಲೇ ನೋಂದಯಿಸಿಕೊAಡು ಹಣ ಪಡೆಯತ್ತಿರುವ ಫಲಾನುಭವಿಗಳು ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡಿಕೊಳ್ಳಬೇಕಿದೆ. ಹಾಗೆಯೇ ಯುವನಿಧಿ ಪ್ಲಸ್‌ಯಡಿ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಹಾಜರಾಗುವುದು. ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom/ಚಿಠಿಠಿ/ಡಿegisಣಡಿಚಿಣioಟಿ_veಡಿ ನ್ನು ಕ್ಲಿಕ್ ಮಾಡಿ ಹೆಸರು ನೋಂದಾಯಿಸಿಕೊಳ್ಳುವುದು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೧೮೦೦೫೯೯೭೧೫೪ ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಖುದ್ದಾಗಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.