ಮಡಿಕೇರಿ, ಫೆ. ೧೧: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ೨೦೨೬-೨೭ರ ಒಟ್ಟು ಬಜೆಟ್‌ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.೨೪.೧ರಷ್ಟು ಅನುದಾನ ಮೀಸಲಿರಿಸಬೇಕು, ಮೀಸಲಿರಿಸಿದ ಅನುದಾನ ದುರ್ಬಳಕೆ ತಡೆಯಲು ಎಸ್‌ಸಿಎಸ್‌ಪಿ, ಟಿಎಸ್‌ಪಿ ಸೆಕ್ಷನ್ ೭ (ಸಿ) ರದ್ದುಪಡಿಸಿ ಆದೇಶ ಹೊರಡಿಸಬೇಕು, ನಿಯಮ ಬಾಹಿರವಾಗಿ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ ೨೫ ಸಾವಿರ ಕೋಟಿ ಹಣವನ್ನು ಹಿಂತಿರುಗಿಸಬೇಕು ಎಂದು ಒತ್ತಾಯಿಸಿದರು.

ಸ್ವಂತ ನಿವೇಶನ ಇಲ್ಲದ ಬಡವರಿಗೆ ನಿವೇಶನ ಖರೀದಿಸಲು ರೂ.೫ ಲಕ್ಷ ಆರ್ಥಿಕ ನೆರವು ನೀಡಬೇಕು ಹಾಗೂ ವಿವಿಧ ವಸತಿ ಯೋಜನೆಗಳಿಗೆ ನೀಡುವ ಮನೆಗಳ ನಿರ್ಮಾಣ ವೆಚ್ಚ ಕನಿಷ್ಟ ರೂ. ೫ ಲಕ್ಷ ವರೆಗೆ ಹೆಚ್ಚಿಸಬೇಕು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ವಸತಿಗೆ ಯೋಗ್ಯವಾದ ಸರ್ಕಾರಿ ಭೂಮಿ ಮಂಜೂರು ಮಾಡಬೇಕೆಂದು ಆಗ್ರಹಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರು ಪ್ರೊ.ಬಿ.ಕೃಷ್ಣಪ್ಪ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಬೇಕು ಹಾಗೂ ಅವರ ಜನ್ಮದಿನ ಜೂ.೯ ನ್ನು ರಜಾರಹಿತ ದಿನವನ್ನಾಗಿ ಆಚರಣೆ ಮಾಡಬೇಕು. ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗಗಳ ಭೂ ಪರಭಾರೆ ನಿಷೇಧ ಕಾಯ್ದೆ (Pಖಿಅಐ) ಸೆಕ್ಷನ್ ೩(೧)(ಃ)ಅಲ್ಲಿರುವ ಉಡಿಚಿಟಿಣeಜ ಐಚಿಟಿಜ ಎಂಬ ಪದವನ್ನು ಬದಲಾಯಿಸಿ ಅeಡಿಣಚಿiಟಿ ಐಚಿಟಿಜ ಎಂದು ತಿದ್ದುಪಡಿ ಮಾಡಬೇಕು.

ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-೨೦೨೦ ಅನ್ನು ತಕ್ಷಣವೇ ರದ್ದುಪಡಿಸಬೇಕು ಹಾಗೂ ಭಾರತದಿಂದ ವಿದೇಶಗಳಿಗೆ ಮಾಡುತ್ತಿರುವ ದನದ ಮಾಂಸ ರಫ್ತು ನಿಲ್ಲಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಮುಂದಿಡಲಾಯಿತು. ಈ ಸಂದರ್ಭ ರಾಜ್ಯ ಸಂಚಾಲಕÀ ಎಂ. ಗುರುಮೂರ್ತಿ ಶಿವಮೊಗ್ಗ, ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ, ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಬೋಜ, ಗೌರಮ್ಮ, ಗಣೇಶ, ಚಿಪ್ಪ, ಕಾಳ, ನಿತಿನ್ ಮತ್ತಿತರರು ಹಾಜರಿದ್ದರು.