ಮಡಿಕೇರಿ, ಫೆ. ೧೨: ೨೦೧೯ರ ಫೆ.೧೪ ರಂದು ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ೪೪ ಮಂದಿ ಯೋಧರ ಸ್ಮರಣೆ ಅಂಗವಾಗಿ ತಾ. ೧೪ ರಂದು (ನಾಳೆ) ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಅರೆಸೇನಾಪಡೆ ಮಾಜಿ ಯೋಧರ ಒಕ್ಕೂಟ - ಕುಶಾಲನಗರ, ಇವರ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ.
ಶ್ರದ್ಧಾಂಜಲಿ ಸಭೆಯಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮಾಜಿ ಶಾಸಕ ಅಪ್ಪಚ್ಚು ರಂಜನ್, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಹರಪಳ್ಳಿ ಹೆಚ್.ಎನ್. ರವೀಂದ್ರ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ ೧ ಗಂಟೆಗೆ ಕುಶಾಲನಗರ ಕಾರು ನಿಲ್ದಾಣದಲ್ಲಿ ಸಾರ್ವಜನಿಕರಿಗೆ ತಂಪು ಪಾನೀಯ ವಿತರಿಸಲಾಗುತ್ತದೆ ಎಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.