ವೀರಾಜಪೇಟೆಯ ಕದನೂರು - ಬೋಯಿಕೇರಿ ನಿವಾಸಿ, ಹಿರಿಯ ಸಾಹಿತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯೆ ನಾಯಕಂಡ ಬೇಬಿ ಚಿಣ್ಣಪ್ಪ (೮೩) ತಾ. ೧೨ ರಂದು ನಿಧನರಾದರು.

ಬೇಬಿ ಚಿಣ್ಣಪ್ಪ ಅವರು ಕೊಡವ ಹಾಗೂ ಕನ್ನಡ ಭಾಷೆಯಲ್ಲಿ ಹಲವು ಪುಸ್ತಕಗಳನ್ನು ಹೊರತಂದಿದ್ದಾರೆ. ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಇವರು, ವೀರಾಜಪೇಟೆ ಫೆಡರೇಶನ್, ವೀರಾಜಪೇಟೆ ಮಹಿಳಾ ಸಹಕಾರ ಸಂಘ, ವೀರಾಜಪೇಟೆ ಕೊಡವ ಸಮಾಜ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅಂತ್ಯಕ್ರಿಯೆ ತಾ. ೧೩ ರಂದು (ಇಂದು) ಸ್ವಗ್ರಾಮದಲ್ಲಿ ನೆರವೇರಲಿದೆ. ಮೃತರು ಓರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಸಂತಾಪ : ಬೇಬಿ ಚಿಣ್ಣಪ್ಪ ಅವರ ನಿಧನಕ್ಕೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಸೇರಿದಂತೆ ಅಕಾಡೆಮಿ ರಿಜಿಸ್ಟಾçರ್, ಸದಸ್ಯರು, ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.