ಮಡಿಕೇರಿ, ಫೆ. ೧೨; ಕೇಂದ್ರ ಸರಕಾರ ಜಾರಿಗೆ ತಂದಿರುವ ಕೆಲವು ಮಸೂದೆ ಹಾಗೂ ಕಾಯ್ದೆಗಳು ಕಾರ್ಮಿಕ ವಿರೋಧಿಯಾಗಿದ್ದು ಅವುಗಳನ್ನು ಹಿಂಪಡೆಯಬೇಕೆAದು ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿಂದು ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಒಟ್ಟು ೧೧ ಕಾರ್ಮಿಕ ಸಂಘಟನೆಗಳನ್ನೊಳಗೊAಡ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ನೇತೃತ್ವದಲ್ಲಿ ನಗರದ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಮೆರವಣಿಗೆ ಮೂಲಕ ಗಾಂಧಿ ಮೈದಾನಕ್ಕೆ ತೆರಳಿದರು. ಮೆರವಣಿಗೆಯುದ್ದಕ್ಕೂ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಕೂಟದ ವಿರುದ್ಧ ಘೋಷಣೆಗಳನ್ನು ಕೂಗಿದರು.
ನಂತರ ಗಾಂಧಿ ಮೈದಾನದಲ್ಲಿ ಬಹಿರಂಗ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್; ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾರ್ಮಿಕರ ಬಗ್ಗೆ ದ್ವಂದ್ವ ನೀತಿ ಅನುಸರಿಸುತ್ತಿದೆ. ಸ್ವಾತಂತ್ರö್ಯ ಹೋರಾಟದ ಸಂದರ್ಭದಲ್ಲಿ ಕಾರ್ಮಿಕರ ತ್ಯಾಗ, ಬಲಿದಾನಗಳನ್ನು ಗುರುತಿಸಿ ಕಾರ್ಮಿಕರಿಗಾಗಿ ೪೪ ಉತ್ತಮ ಕಾಯ್ದೆಗಳನ್ನು ಜಾರಿಗೊಳಿಸಲಾಗಿತ್ತು. ಆದರೀಗ ಕಾಯ್ದೆಯನ್ನು ೪ ವಿಭಾಗಗಳಾಗಿ ವಿಂಗಡಿಸಿ ಕಾರ್ಮಿಕರ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಹಕ್ಕುಗಳನ್ನು ಕಸಿದುಕೊಳ್ಳುವದರೊಂದಿಗೆ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಪ್ರಯತ್ನವನ್ನು ಕೇಂದ್ರ ಸರಕಾರ ಮಾಡುತ್ತಿದೆ. ದುಡಿಯುವ ವರ್ಗಕ್ಕೆ ಅನ್ಯಾಯ ಮಾಡುತ್ತಿದ್ದು, ಅದಾನಿ, ಅಂಬಾನಿಯವರAತಹ ಶ್ರೀಮಂತರನ್ನು ಮತ್ತಷ್ಟು ಶ್ರೀಮಂತರನ್ನಾಗಿಸಲು ಸರಕಾರ ಹೊರಟಿದೆ ಎಂದು ಆರೋಪಿಸಿದರು. ಈ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ನವೆಂಬರ್‌ನಲ್ಲಿ ೨೫ಕೋಟಿ ಮಂದಿ ಕಾರ್ಮಿಕರು ಪ್ರತಿಭಟನೆ ನಡೆಸಿದರೂ ಕೇಂದ್ರ ಸರಕಾರ ಜಾರಿಗೊಳಿಸಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಮಹಾತ್ಮ ಗಾಂಧಿ ಅವರ ಹೆಸರನ್ನು ಬದಲಾಯಿಸಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ಹೋರಾಟ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ಸರಕಾರ ಈ ಕಾಯ್ದೆಗಳನ್ನು ಜಾರಿಗೊಳಿಸಲು ಅವಕಾಶ ನೀಡಬಾರದೆಂದು ಆಗ್ರಹಿಸಿದರು.
ರೈತ ಸಂಘದ ಪರವಾಗಿ ಮಾತನಾಡಿದ ನೆರವಂಡ ಉಮೇಶ್; ಕಷ್ಟಗಳಿಗೆ ವಿರುದ್ಧವಾಗಿ ನಿಂತು ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಿಂದೆ ಕೇಂದ್ರ ಸರಕಾರ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ರೂಪಿಸಲಾಗಿತ್ತು. ಆದರೆ ಗಾಂಧಿಯನ್ನು ಒಪ್ಪದ, ಗೋಡ್ಸೆಯನ್ನು ಒಪ್ಪಿಕೊಳ್ಳುವ ಕೇಂದ್ರ ಸರಕಾರ ಹೆಸರನ್ನು ಬದಲಾಯಿಸಿದಲ್ಲದೆ, ರಾಜ್ಯದ ಪಾಲು ಹಣವನ್ನೂ ಕೂಡ ಹೆಚ್ಚಿಸಿದೆ. ಯಾರೊಂದಿಗೂ ಸಮಾಲೋಚನೆ ಮಾಡದೆ, ಚರ್ಚಿಸದೇ ಬದಲಾವಣೆ ಮಾಡಲಾಗಿದೆ. ಇದರಿಂದ ಬಡವರಿಗೆ ಬದುಕು ಕಟ್ಟಿಕೊಳ್ಳಲು ತೊಂದರೆಯಾಗುತ್ತದೆ. ಬಡವರ ಬದುಕು ಕಸಿದುಕೊಂಡ ಸರಕಾರಕ್ಕೆ ಧಿಕ್ಕಾರ ಹೇಳುವದರೊಂದಿಗೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕೆಂದು ಹೇಳಿದರು.
ನಂತರ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ.ಸಾಬು, ಎಐಟಿಯುಸಿ ಅಧ್ಯಕ್ಷ ಹೆಚ್.ಎಂ.ಸೋಮಪ್ಪ, ಉಪಾಧ್ಯಕ್ಷ ಎನ್.ಮಣಿ, ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ.ಆರ್.ದಿನೇಶ್ ಶೆಟ್ಟಿ, ಐಎನ್‌ಟಿಯುಸಿ ಅಧ್ಯಕ್ಷ ಅಣ್ಣಯ್ಯ, ತೋಟ ಕಾರ್ಮಿಕರ ಸಂಘದ ಕಾರ್ಯದರ್ಶಿ ಪುಷ್ಪ, ಕಾರ್ಮಿಕರ ಸಂಘದ ಕಾರ್ಯದರ್ಶಿ ಮಹದೇವ್, ಅಂಗನವಾಡಿ ಕಾರ್ಯಕರ್ತರ ಸಂಘದ ಅಧ್ಯಕ್ಷೆ ಸುಮಿತ್ರ, ಕಾರ್ಯದರ್ಶಿ ಜಮುನ, ಬಿಸಿ ಊಟ ಕಾರ್ಮಿಕರ ಸಂಘದ ಅಧ್ಯಕ್ಷೆ ಕುಸುಮ, ಕರ್ನಾಟಕ ಪ್ರಾಂತ ರೈತ ಸಂಘದ ಟಿ.ಟಿ.ಉದಯ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಾಧ್ಯಮ ಸಂವಹನ ವಕ್ತಾರ ಟಿ.ಪಿ.ರಮೇಶ್, ಮುಡಾ ಸದಸ್ಯೆ ಮಿನಾಜ್ ಪ್ರವೀಣ್, ಯುವ ಕಾಂಗ್ರೆಸ್‌ನ ಮೈಸಿ ಕತ್ತಣಿರ ಸೇರಿದಂತೆ ಇತರ ಪ್ರಮುಖರು ಪಾಲ್ಗೊಂಡಿದ್ದರು.