ಕೂಡಿಗೆ, ಫೆ. ೧೨: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಕ್ರೀಡಾ ಶಾಲೆಯಲ್ಲಿ ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞ, ಜಂತುಹುಳು ನಿವಾರಣಾ ದಿನದ ಕುರಿತು ವಿವರಿಸಿದರು.
ಜಂತುಹುಳದಿAದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ, ಅನೀಮಿಯ ಮುಕ್ತ ಕರ್ನಾಟಕ ಕಾರ್ಯಕ್ರಮಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಮಾತ್ರೆ ಸೇವನೆ ಮತ್ತು ಈ ದಿನದ ಮಹತ್ವದ ಬಗ್ಗೆ ತಿಳಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರೇಶ್, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಶಕೀನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್.ಜೆ. ನಾಗರಾಜ್, ಕ್ರೀಡಾ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಅಶ್ವಿತ, ಕಾಲೇಜಿನ ಉಪನ್ಯಾಸಕ ವೃಂದದವರು ಮತ್ತು ಶಾಲೆಯ ಸಹ ಶಿಕ್ಷಕ ವೃಂದದವರು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು