ಕೂಡಿಗೆ, ಫೆ. ೧೨: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಅಭಿವೃದ್ಧಿ ಸಂಸ್ಥೆ ಮತ್ತು ಶ್ರೀ ಅನ್ನಪೂರ್ಣೇಶ್ವರಿ ಚಾಲ್ಟಿ ಫೌಂಡೇಶನ್ ಸಂಸ್ಥೆ ವತಿಯಿಂದ ಕೂಡಿಗೆ ಗ್ರಾಮ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ತರಬೇತಿ ಕಾರ್ಯಾಗಾರವನ್ನು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಚಾಲನೆ ನೀಡಿದರು.
ಪಂಚಾಯಿತಿಯಲ್ಲಿ ನವೀಕರಿಸಬಹುದಾದ ಇಂಧನ ಘನತ್ಯಾಜ್ಯ ನಿರ್ವಹಣೆ ಮತ್ತು ಮಳೆ ನೀರು ಕೊಯ್ಲು ಕುರಿತಂತೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ಮನೆಯಲ್ಲಿಯೇ ಕಸವನ್ನು ಹೇಗೆ ವಿಲೇವಾರಿ ಮಾಡಬೇಕು ಮತ್ತು ಪರಿಸರ ಮಾಲಿನ್ಯವನ್ನು ತಡೆಗಟ್ಟುವುದರ ಕುರಿತು ಸಂಪನ್ಮೂಲ ವ್ಯಕ್ತಿ ವಿನಾಯಕ್ ಮಾಹಿತಿ ನೀಡಿದರು.
ಅನ್ನಪೂರ್ಣೇಶ್ವರಿ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಸೌಮ್ಯ, ಸೋಲಾರ್‌ನಿಂದ ನವೀಕರಿಸಬಹುದಾದ ಇಂಧನದ ಬಗ್ಗೆ ವಿವರಿಸಿದರು. ಸಂಪನ್ಮೂಲ ವ್ಯಕ್ತಿ ವಸಂತ್, ಪ್ರಧಾನಮಂತ್ರಿ ಸೂರ್ಯಗ್ರಹ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆದುಕೊಳ್ಳುವುದು, ಸೋಲಾರ್ ಯಾವ ರೀತಿ ಅಳವಡಿಸಿಕೊಳ್ಳಬೇಕು ಮತ್ತು ಸೋಲಾರ್‌ನ ಉಪಯೋಗಗಳ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಕಾರ್ಯದರ್ಶಿ ಪುನೀತ್, ಎನ್.ಆರ್.ಎಲ್.ಎಂ. ಮೇಲ್ವಿಚಾರಕಿ ಪುಷ್ಪ ಸೇರಿದಂತೆ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.