ಮಡಿಕೇರಿ, ಫೆ.೧೨: ಮಡಿಕೆÃರಿ ದಾಸವಾಳ ರಸ್ತೆಯಲ್ಲಿರುವ ಶ್ರೀ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿಯ ಪ್ರಯುಕ್ತ ತಾ.೧೫ ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿಯ ಪದಾಧಿಕಾರಿಗಳು ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಂದು ಬೆಳಿಗ್ಗೆ ೭ ಗಂಟೆಗೆ ಮಹಾಗಣಪತಿ ಹೋಮ, ೯ ಗಂಟೆಗೆ ಶ್ರೀ ವೀರಭದ್ರ ದೇವರ ಉತ್ಸವ ಮೂರ್ತಿಯ ನಗರ ಪ್ರದಕ್ಷಿಣೆಯ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಡೊಳ್ಳುಕುಣಿತ ಭಜನೆ ತಂಡ, ಮುಂತಾದ ತಂಡಗಳು ಭಾಗವಹಿಸಲಿವೆ.
ಮೆರವಣಿಗೆಯು ದೇವಾಲಯದಿಂದ ಹೊರಟು ದಾಸವಾಳ ರಸ್ತೆಗಾಗಿ ಗಣಪತಿ ಬೀದಿಯಿಂದ ಬನ್ನಿಮಂಟಪದಲ್ಲಿ ಪೂಜೆ ಸಲ್ಲಿಸಿ ನಂತರ ಮಹಾದೇವಪೇಟೆಗಾಗಿ ಚೌಕಿ ವೃತ್ತದಿಂದ ಹಳೆ ಬಸ್ ನಿಲ್ದಾಣಕ್ಕಾಗಿ ಜೂನಿಯರ್ ಕಾಲೇಜು ರಸ್ತೆಗಾಗಿ ಪುನಃ ದೇವಾಲಯಕ್ಕೆ ತಲುಪುತ್ತದೆ ಎಂಬುದಾಗಿ ಸಮಿತಿ ಪದಾಧಿಕಾರಿಗಳು ಮಾಹಿತಿ ಇತ್ತರು. ಮಧ್ಯಾಹ್ನ ೧ ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ ೬ ಗಂಟೆಗೆ ಮಹಾಮೃತ್ಯುಂಜಯ ಹೋಮವನ್ನು ಏರ್ಪಡಿಸಲಾಗಿದೆ. ಮೃತ್ಯುಂಜಯ ಹೋಮಕ್ಕೆ ನೋಂದಾಯಿಸುವವರು ಮೊ.೯೩೪೩೮೧೯೧೩೮ ಅನ್ನು ಸಂಪರ್ಕಿಸಬಹುದಾಗಿದೆ
ನAತರ ರಾತ್ರಿ ೯ ಗಂಟೆಯಿAದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು, ಅಲ್ಲದೇ ೯ ಗಂಟೆಯಿAದ ಜಾಮ ಪೂಜೆ ನಡೆಸಲಾಗುವುದು. ಎಂದು ಮಾಹಿತಿ ನೀಡಿದರು.
ಶಿವರಾತ್ರಿ ಬಳಿಕ ದೇವಾಲಯದ ಜೀಣೋದ್ಧಾರ ಕಾರ್ಯ ನಡೆಯಲಿರುವುದಾಗಿಯೂ ಈ ಸಂದರ್ಭ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ದೇವಾಲಯದ ಅಧ್ಯಕ್ಷ ಪಿ.ಜಿ.ಸುಕುಮಾರ್, ಗೌರವ ಅಧ್ಯಕ್ಷ ಪಿ.ಜಿ.ಮಂಜುನಾಥ್, ಉಪಾಧ್ಯಕ್ಷ ಎಂ.ಬಿ.ಚೇತನ್, ಪ್ರಧಾನ ಕಾರ್ಯದರ್ಶಿ ಎಂ.ಪಿ.ವಿಷ್ಣು, ನಿದೇರ್ಶಕರಾದ ಪಿ.ಜಿ.ಕಮಲ್, ಸದಸ್ಯರಾದ ಸಂದೀಪ್ ಇದ್ದರು.