ಮಡಿಕೇರಿ, ಫೆ. ೧೩: ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ, ತಲಕಾವೇರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ತಾ. ೧೫ ರಂದು ವಿಶೇಷ ಪೂಜೆಗಳು ನೆರವೇರಲಿವೆ.

ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ ೭ ಗಂಟೆಗೆ ಶತರುದ್ರಾಭಿಷೇಕ, ಬೆಳಿಗ್ಗೆ ೯.೩೦ ಕ್ಕೆ ರುದ್ರಹೋಮ, ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ದೇವರ ಉತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಸಂಜೆ ೫.೩೦ ರಿಂದ ಭಜನೆ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ಸಂಜೆ ೬ ಗಂಟೆಗೆ ತಾಯಂಬಕ ಸೇವೆ, ಸಂಜೆ ೬.೩೦ಕ್ಕೆ ಲಕ್ಷದೀಪೋತ್ಸವ, ಏಕಾದಶ ರುದ್ರಾಭಿಷೇಕ. ಸಂಜೆ ೭.೩೦ಕ್ಕೆ ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ, ಲಘು ಉಪಹಾರ. ರಾತ್ರಿ ೧೦.೩೦ಕ್ಕೆ ದೇವರ ತ್ರಿವೇಣಿ ಸಂಗಮ ಭೇಟಿ ಮತ್ತು ಬಾಣಬಿರುಸು ಕಾರ್ಯಕ್ರಮ. ರಾತ್ರಿ ೧೧ ಗಂಟೆಗೆ ಬಂಟ್ವಾಳದ ಯಕ್ಷ ಕಾವ್ಯ ತರಂಗಿಣಿ ಭಾಗವತ ದಿ|| ಚಂದಪ್ಪ ಪೂಜಾರಿ ಪ್ರತಿಷ್ಠಾನದಿಂದ ಸ್ವರ ಮಾಧುರಿ ಕಾವ್ಯ ಕನ್ನಿಕೆ ಬಿರುದಾಂಕಿತ ಸಂದ್ಯಾ ಪೂಜಾರಿ ದರ್ಬೆ ಇವರ ದಕ್ಷ ನಿರ್ದೇಶನದಲ್ಲಿ ಯಕ್ಷಗಾನ ಬಯಲಾಟ- ಪ್ರಸಂಗ ‘ಓಂ ನಮಃ ಶಿವಾಯ’ ನಡೆಯಲಿದೆ.

ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ ೯.೩೦ ಗಂಟೆಗೆ ಶತರುದ್ರಾಭಿಷೇಕ. ಮಧ್ಯಾಹ್ನ ೧೨ ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ. ಸಂಜೆ ೭ ಗಂಟೆಗೆ ಏಕಾದಶ ರುದ್ರಾಭಿಷೇಕ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.