ನಾಪೋಕ್ಲು, ಫೆ. ೧೩: ಇಲ್ಲಿಗೆ ಸಮೀಪದ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ಕಿರುಂದಾಡುವಿನ ಅಂಗನವಾಡಿ ಕೇಂದ್ರ ಹಾಗೂ ಕೊಣಂಜಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಉದ್ಘಾಟಿಸಿದರು.

ಕೊಣಂಜಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಪಂಚಾಯಿತಿಯ ಸದಸ್ಯರು, ಪಕ್ಷಗಳ ಮುಖಂಡರು, ಬ್ಲಾಕ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಶೇರಿ ಗಿರೀಶ್, ಇಲಾಖೆಗಳ ಅಧಿಕಾರಿಗಳು ಹಾಗೂ ಅಂಗನವಾಡಿ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.