ಮಡಿಕೇರಿ ಫೆ. ೧೩: ಪಿ.ಕೃಷ್ಣೇಗೌಡ ಅವರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ ಪಿ.ಕೆ. ಉದಯ ಕುಮಾರ್ ಆಯ್ಕೆಯಾಗಿದ್ದಾರೆ. ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ನಡೆದ ರಕ್ಷಣಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಸಂಯೋಜಕರಾಗಿ ತನು ಕಿಶೋರ್ ಕೆ.ಕೆ, ಜಿಲ್ಲಾ ಸಮಿತಿಯ ವಕ್ತಾರರಾಗಿ ಜೀವನ್ ಎಂ.ಜಿ, ಪ್ರಚಾರ ಸಮಿತಿಯ ಜಿಲ್ಲಾ ಉಸ್ತುವಾರಿಯಾಗಿ ಶಶಿಕುಮಾರ್ ಹೆಚ್.ಎಂ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಕಲಾ ಪ್ರಕಾಶ್, ಜಿಲ್ಲಾ ಉಪಾಧ್ಯಕ್ಷರಾಗಿ ಸೋನಿ, ವೀರಾಜಪೇಟೆ ತಾಲೂಕು ಅಧ್ಯಕ್ಷರಾಗಿ ಕಾರ್ಯಪ್ಪ ಎ.ಜಿ, ಉಸ್ತುವಾರಿಯಾಗಿ ರಂಜನ್ ಕೆ.ಐ, ಜಿಲ್ಲಾ ಮಹಿಳಾ ಉಸ್ತುವಾರಿಗಳಾಗಿ ಮಂಜುಳಾ ಹಾಗೂ ಭವ್ಯ ವಿನೋದ್ ಆಯ್ಕೆಯಾದರು. ಜಿಲ್ಲೆಯ ಗಡಿಭಾಗವಾದ ಸಂಪಾಜೆ ಹೋಬಳಿಯಲ್ಲಿ ಸಂಘಟನೆಯನ್ನು ಸದೃಢಗೊಳಿಸುವ ಸಲುವಾಗಿ ಉಸ್ತುವಾರಿಯಾಗಿ ಸುಕುಮಾರ್ ಕೆ.ಕೆ ಅವರನ್ನು ಆಯ್ಕೆ ಮಾಡಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ನಾಯಕ ಪಿ. ಕೃಷ್ಣೇಗೌಡ ಅವರು ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.