ಮಡಿಕೇರಿ, ಫೆ. ೧೩; ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಅಧೀನದಲ್ಲಿ ಬರುವ ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲೊಂದಾದ ಶ್ರೀ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಗೆ ಸದಸ್ಯರುಗಳನ್ನು ನೇಮಕ ಮಾಡುವ ಸಂಬAಧ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯ ನಿರ್ಣಯದಂತೆ ಹಾಗೂ ರಾಜ್ಯ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರಿಂದ ಅನುಮೋದನೆಗೊಂಡಿರುವ ರಾಜ್ಯದ ಒಟ್ಟು ೧೮ ‘ಎ’ ಪ್ರವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಅಧಿನಿಯಮ ೨೦೧೧ರ ಸೆಕ್ಷನ್ ೨೫ರನ್ವಯ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾದಿಗಳಿಂದ/ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೈಕಿ ಕೊಡಗು ಜಿಲ್ಲೆಯ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯ ಸಮಿತಿಗೂ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ ೨೫ವರ್ಷಕ್ಕಿಂತ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆ-೧(ಬಿ) ೯೨೨ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಯನ್ನು ೨೭-೨-೨೦೨೬ರ ಒಳಗಾಗಿ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಧರ್ಮಾದಾಯ ದತ್ತಿಗಳ ಇಲಾಖೆ, ಮಿಂಟೋ ಶ್ರೀ ಆಂಜನೇಯ ಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು-೫೬೦೦೧೮ ಇಲ್ಲಿಗೆ ನೇರವಾಗಿ ಸಲ್ಲಿಸಬೇಕಿದೆ. ಅಂತಹ ಸರ್ಜಿಗಳನ್ನು ಮಾತ್ರ ಪರಿಗಣಿಸಲಾಗುವದು. ನಿಗದಿತ ಅವಧಿಯ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವದಿಲ್ಲ. ನಿಗದಿತ ಅರ್ಜಿ ನಮೂನೆಯು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು ತಿತಿತಿ.iಣms.ಞಚಿಡಿ.gov.iಟಿ ನಲ್ಲಿ ಲಭ್ಯವಿರುತ್ತದೆ ಎಂದು ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ ಕಾರ್ಯದರ್ಶಿ ಹಾಗೂ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.