ಮಡಿಕೇರಿ, ಫೆ. ೧೩: ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜ ಹಾಗೂ ಮಡಿಕೇರಿ ತಾಲೂಕು ಮೊಗೇರ ಸೇವಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ೧೦ನೇ ವರ್ಷದ ರಾಜ್ಯಮಟ್ಟದ ಮೊಗೇರ ಕ್ರೀಡಾಕೂಟ ಏ. ೧೮ ಹಾಗೂ ೧೯ ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಜ್ಯದ ವಿವಿಧ ಕಡೆಗಳಿಂದ ಮೊಗೇರ ಸಮುದಾಯದ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ಕ್ರೀಡೋತ್ಸವದಲ್ಲಿ ಕಬಡ್ಡಿ, ಕ್ರಿಕೆಟ್, ವಾಲಿಬಾಲ್, ಹಾಗೂ ಮಹಿಳೆಯರಿಗೆ ಥ್ರೋ ಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.