ಸುಂಟಿಕೊಪ್ಪ, ಫೆ. ೧೩: ಕಂಬಿಬಾಣೆಯ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ತಾ. ೧೫ ರಂದು ಭಾನುವಾರದಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ.
ಬೆಳಿಗ್ಗೆ ಸಭಾಭವನ ನಿರ್ಮಾಣಕ್ಕಾಗಿ ಭೂಮಿಪೂಜೆ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ನಂತರ ಮಹಾಮಂಗಳಾರತಿಯೊAದಿಗೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.