ಮಡಿಕೇರಿ, ಫೆ.೧೪: ಮಾಹಿತಿ ತಂತ್ರಜ್ಞಾನದ ಬಳಕೆಯಿಂದ ಸರಕಾರಿ ಸೇವೆಗಳು ಹಾಗೂ ಕೆಲಸಗಳನ್ನು ಸುಲಭವಾಗಿ ಹಾಗೂ ಶೀಘ್ರವಾಗಿ ಜನಸಾಮಾನ್ಯರಿಗೆ ಒದಗಿಸಲು ಸಾಧ್ಯವಾಗಿದೆ. ಅವುಗಳ ಮಾಹಿತಿಗಳು ಅಂತರ್ಜಾಲದಲ್ಲಿ ಸೋರಿಕೆಯಾಗದಂತೆ ಸುರಕ್ಷಿತ ಕ್ರಮ ಅನುಸರಿಸುವುದು ಅತ್ಯಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು ಹೇಳಿದರು.
ಸುರಕ್ಷಿತ ಅಂತರ್ಜಾಲ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಅಂತರ್ಜಾಲ ಸುರಕ್ಷತೆಯ ಕುರಿತು ಏರ್ಪಡಿಸಲಾಗಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರೊಂದಿಗೆ ಸಂವಹನ ಅತ್ಯಂತ ಸುಲಭವಾಗಿದೆ. ಸರಕಾರಿ ವೆಬ್‌ಸೈಟ್‌ಗಳನ್ನು ಹ್ಯಾಕರ್‌ಗಳು ಸುಲಭವಾಗಿ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸೈಬರ್ ಅಪರಾಧಗಳ ಬಗ್ಗೆ ಅರಿವು ಹೊಂದಿದಾಗ ತಮಗಾದ ಮೋಸದ ಬಗ್ಗೆ ದೂರು ನೀಡಿ ನ್ಯಾಯ ಪಡೆಯಲು ಅನುಕೂಲವಾಗುತ್ತದೆ ಎಂದು ಅವರು ವಿವರಿಸಿದರು. ಅಧಿಕಾರಿಗಳು ಕಚೇರಿಯ ಕಂಪ್ಯೂಟರ್, ಮೊಬೈಲ್‌ಗಳಲ್ಲಿ ಅಂತರ್ಜಾಲ ಬಳಕೆಯ ಉಪಯೋಗ ಪಡೆದುಕೊಳ್ಳಬೇಕು. ಜೊತೆಗೆ ಅದರ ಅನಾನುಕೂಲತೆಗಳ ಬಗ್ಗೆ ಜಾಗೃತಿ ವಹಿಸಬೇಕು ಎಂದರು. ಆನ್‌ಲೈನ್ ವ್ಯವಹಾರ, ಬ್ಯಾಂಕಿAಗ್ ಉಪಯೋಗಿಸುವಾಗ ಎಚ್ಚರ ವಹಿಸಬೇಕು. ಕೆಲವೊಮ್ಮೆ ಅಪರಿಚಿತ ಮೊಬೈಲ್ ನಂಬರ್‌ಗಳ ಬಗ್ಗೆಯೂ ಅಧಿಕಾರಿಗಳು ಗಮನವಹಿಸಬೇಕು. ಯಾವುದೇ ಮಾಹಿತಿ ನೀಡುವಾಗ ಎಚ್ಚರ ವಹಿಸಬೇಕು ಎಂದರು.
ಎನ್‌ಐಸಿ ಅಧಿಕಾರಿ ಸಂಗೀತಾ ಮಾತನಾಡಿ, ಸುರಕ್ಷಿತ ಅಂತರ್ಜಾಲ ದಿನ ಪ್ರಯುಕ್ತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಸಾಮಾಜಿಕ ಜಾಲತಾಣಗಳಾದ ವಾಟ್ಸಾö್ಯಪ್, ಫೇಸ್‌ಬುಕ್, ಇನ್ಸ್ಟಾಗ್ರಾಮ್ ಬಳಸುತ್ತಿದ್ದಾರೆ. ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ಪಾಸ್‌ವರ್ಡ್ಗಳನ್ನು ಯಾರ ಬಳಿಯೂ ಹಂಚಿಕೊಳ್ಳಬಾರದು. ಇದರಿಂದ ವಂಚಕರು ಮಾಹಿತಿ ಕದಿಯುವ ಸಾಧ್ಯತೆಗಳಿವೆ ಎಂದರು. ಸಾರ್ವಜನಿಕ ಸ್ಥಳಗಳಲ್ಲಿ ಲಭ್ಯವಾಗುವ ಡಿವೈಸ್‌ಗಳನ್ನು ಬಳಸಬೇಡಿ, ಇತರರ ಮೊಬೈಲ್ ಯುಎಸ್‌ಬಿ ಕೇಬಲ್‌ಗಳನ್ನು ಉಪಯೋಗಿಸುವಾಗ ಎಚ್ಚರ ವಹಿಸಿ ಎಂದು ಎನ್‌ಐಸಿ ಅಧಿಕಾರಿ ಅವರು ಹೇಳಿದರು. ಅಲ್ಲದೇ ನಮ್ಮ ದಿನನಿತ್ಯದ ಜೀವನದಲ್ಲಿ ಅಂತರ್ಜಾಲದ ಸುರಕ್ಷಿತ ಬಳಕೆ, ಸಾಮಾನ್ಯ ಸೈಬರ್ ಬೆದರಿಕೆಗಳು, ಸೈಬರ್ ಅಪರಾಧಗಳನ್ನು ವರದಿ ಮಾಡುವ ಕಾರ್ಯವಿಧಾನ, ಆನ್‌ಲೈನ್‌ನಲ್ಲಿ ಸುರಕ್ಷಿತವಾಗಿರಲು ಜಾಗೃತಿ ಸಂಪನ್ಮೂಲಗಳ ಕುರಿತು ವಿವರಿಸಿದರು.
ಕಾರ್ಯಾಗಾರದಲ್ಲಿ ಡಿವೈಎಸ್ಪಿ ಲಕ್ಷಿö್ಮಕಾಂತ ತಳವಾರ್, ಡಿವೈಒ ಸಿಂಧೂರ್ ರಾಮಯ್ಯ ತಳವಾರ್, ಇಂಜಿನಿಯರ್ ತೇಜಸ್ ಎಸ್. ನೆಟ್‌ವರ್ಕ್ ಇಂಜಿನಿಯರ್ ಆಕಾಶ್ ಕೆ.ಆರ್., ಸುಯೋಗ್ ಸ್ಪಿನ್ಸನ್, ಇ-ಆಫೀಸ್ ಇಲಾಖಾಧಿಕಾರಿ ಅಜಯ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.