ಸೋಮವಾರಪೇಟೆ, ಫೆ. ೧೪: ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ನಿನ್ನೆ ರಾತ್ರಿ ಇನಕನಹಳ್ಳಿಯಲ್ಲಿ ನಡೆದಿದೆ.
ಹಿಂಬದಿ ಸವಾರ ಸಣ್ಣಪುಟ್ಟ ಗಾಯಗ ಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತೋಳೂರುಶೆಟ್ಟಳ್ಳಿ ಗ್ರಾ.ಪಂ.ನ ಕೂತಿ ಗ್ರಾಮದ ಸಿ.ಜೆ. ಸಂದೀಪ್ (೪೧) ಮೃತ ದುರ್ದೈವಿ.
ಕಾಫಿ ತೋಟದಲ್ಲಿ ಕೆಲಸ ಮುಗಿಸಿ ದೊಡ್ಡ ತೋಳೂರು ಗ್ರಾಮದ ಪ್ರಸನ್ನ ಅವರನ್ನು ಅವರ ಮನೆಗೆ ಬಿಡಲು ಬೈಕ್ ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭ ಇನಕನಹಳ್ಳಿ ಬಳಿಯ ಮುಖ್ಯರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ನಿಯಂತ್ರಣ ಕಳೆದುಕೊಂಡ ಬೈಕ್ ಅಪ್ಪಳಿಸಿದೆ. ಪರಿಣಾಮ ಸಂದೀಪ್ ಅವರ ತಲೆ, ಮುಖದ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಿಂಬದಿ ಸವಾರ ಪ್ರಸನ್ನ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಸಂಬAಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.