ಮಡಿಕೇರಿ, ಫೆ. ೧೪: ಮಡಿಕೇರಿ ತಾಲೂಕಿನ ಕಾಂತೂರು ಗ್ರಾಮದ ಪ್ರಗತಿಪರ ಕೃಷಿಕ ಮಠದಮನೆ ವಿ.ಯಂ. ಧನಂಜಯ (ಧನು) ಅವರಿಗೆ ರಾಜ್ಯಮಟ್ಟದ ಕೃಷಿ ಪ್ರಶಸ್ತಿ ಲಭಿಸಿದೆ.

೨೦೨೩-೨೦೨೪ನೇ ಮಳೆ ಆಶ್ರಿತ ಕೃಷಿ ಚಟುವಟಿಕೆಯಲ್ಲಿ ೧೧೪.೪೯೭ ಕ್ವಿಂಟಲ್ ಭತ್ತ ಇಳುವರಿ ಪಡೆದಿದ್ದು, ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನವನ್ನು ಗಳಿಸಿ ಪ್ರಶಸ್ತಿಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಸ್ವೀಕರಿಸಿದರು. ಇವರಿಗೆ ೨೦೨೫ ರ ಕೊಡಗು ಜಿಲ್ಲೆಯ ಪ್ರಗತಿಪರ ರೈತ ಪ್ರಶಸ್ತಿಯನ್ನು ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೃಷಿ ಸಚಿವ ಚೆಲುವರಾಯ ಸ್ವಾಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಪ್ರದಾನ ಮಾಡಿದರು.